ಬೆಂಗಳೂರು: ‘ಕಬ್ಬಿನ ದರ ನಿರ್ಧಾರಕ್ಕೆ ಸಂಬಂಧಿಸಿದಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಡಿ. 9ರಂದು ಸಭೆ ನಡೆಸಲಿದ್ದೇನೆ. ಆ ಸಭೆಯಲ್ಲಿ ಗೊಂದಲಗಳು ನಿವಾರಣೆಯಾಗಲಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ನ್ಯಾನೊ ತಂತ್ರಜ್ಞಾನ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಅವರು,ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.

‘ಸರ್ಕಾರ ನಿಗದಿ ಮಾಡಿದ ದರ ನೀಡಲು ಹಲವು ಕಾರ್ಖಾನೆಗಳ ಮಾಲೀಕರು ಈಗಾಗಲೇ ಸಮ್ಮತಿ ಸೂಚಿಸಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ ಈ ವಿಷಯವಾಗಿ ಹೆಚ್ಚಿನ ಪ್ರತಿಕ್ರಿಯೆ ನೀಡಲಾರೆ. ಆದರೆ, ಡಿ. 9ರಂದು ನಡೆಯುವ ಸಭೆಯಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ’ ಎಂದು ಹೇಳಿದರು.

‘ಕಬ್ಬಿನ ವಿಷಯವಾಗಿ ಚರ್ಚಿಸಲು ನವದೆಹಲಿಯಲ್ಲಿ ಡಿ. 6ರಂದು ಪ್ರಧಾನ ಮಂತ್ರಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಭಾಗವಹಿಸಲಿದ್ದೇನೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.