ಕಲಬುರ್ಗಿ: ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಇಲ್ಲಿನ ಅವರ ನಿವಾಸಕ್ಕೆ ಬಂಧುಗಳು, ಅಭಿಮಾನಿಗಳು, ರಾಜಕೀಯ ಮುಖಂಡರು, ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ. ಮಧ್ಯಾಹ್ನದ ಬಳಿಕ ವಿಶೇಷ ವಿಮಾನದಲ್ಲಿ ಪಾರ್ಥೀವ ಶರೀರವನ್ನು ಬೀದರ್ ವಿಮಾನ ನಿಲ್ದಾಣದ ಮೂಲಕ ಇಲ್ಲಿಗೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.

ಮನೆಯಲ್ಲಿ ದುಃಖ ಮಡುಗಟ್ಟಿದೆ. ಗಣ್ಯರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ. ಶಾಸಕ ಖಮರುಲ್ ಇಸ್ಲಾಂ, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣಗೌಡ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೇರಿದಂತೆ ಇತರ ಗಭ್ಯರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಅವರು ಮನೆಗೆ ಭೇಟಿ ನೀಡಿದ್ದಾರೆ.

ಮಧ್ಯಾಹ್ನ 3ಕ್ಕೆ ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ಬೀದರ್‌ಗೆ ತರಲಾಗುತ್ತಿದೆ. ಅಲ್ಲಿ ಎರಡು ಗಂಟೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿ, ನಂತರ ರಸ್ತೆ ಮೂಲಕ ಕಲಬುರ್ಗಿಯ ನಿವಾಸಕ್ಕೆ ತರಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಜ್ಯಕ್ಕೆ ತುಂಬಲಾರದ ನಷ್ಟ
ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ನಿಧನದಿಂದ ಪಕ್ಷಕ್ಕೆ ಅಷ್ಟೇ ಅಲ್ಲ, ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ಧರ್ಮಸಿಂಗ್ ನಿಧನ ನಮ್ಮೆಲ್ಲರಿಗೂ ಆಘಾತ ಉಂಟು ಮಾಡಿದೆ ಎಂದರು.

ಇದನ್ನೂ ಓದಿ...

* ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್ ಹೃದಯಾಘಾತದಿಂದ ನಿಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.