ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿಯಲ್ಲಿನ ನೂತನ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ

Last Updated 27 ಜುಲೈ 2017, 13:26 IST
ಅಕ್ಷರ ಗಾತ್ರ

ಕಲಬುರ್ಗಿ: ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಕಲಬುರ್ಗಿಯಲ್ಲಿನ ಅವರ ಮನೆ ಹಿಂಭಾಗದ ನೂತನ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಸಂಜೆ 6 ಗಂಟೆ ಸುಮಾರಿಗೆ ಬೀದರ್‌ನಿಂದ ರಸ್ತೆ ಮೂಲಕ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.

ಧರ್ಮಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದರು. ಧರ್ಮಸಿಂಗ್ ಅವರ ಮನೆಗೆ ಹೊಂದಿಕೊಂಡಂತಿರುವ ನೂತನ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲು ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿ ಉಜ್ವಲಕುಮಾರ್ ಘೋಷ್, ಈಶಾನ್ಯ ವಲಯ ಐಜಿಪಿ ಅಲೋಕಕುಮಾರ್, ಜಿಲ್ಲಾ ಎಸ್ಪಿ ಎನ್.ಶಶಿಕುಮಾರ್, ಹೆಚ್ಚುವರಿ ಎಸ್ಪಿ ಜಯಪ್ರಕಾಶ್, ಜಿಲ್ಲಾ ಪಂಚಾಯಿತಿ ಸಿಇಒ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಪಾಲಿಕೆ ಆಯುಕ್ತ ಪಿ.ಸುನಿಲಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಅಂತಿಮ ದರ್ಶನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಅಂತಿಮ ದರ್ಶನಕ್ಕೆ ವ್ಯವಸ್ಥೆ

‘ಮಧ್ಯಾಹ್ನ 3ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಪಾರ್ಥಿವ ಶರೀರವನ್ನು ಬೀದರ್‌ಗೆ ತರಲಾಗುವುದು. ಅಲ್ಲಿ 2 ಗಂಟೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಆ ಬಳಿಕ ರಸ್ತೆ ಮೂಲಕ ಕಲಬುರ್ಗಿಗೆ ತರಲಾಗುವುದು. ನೂತನ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಸಂಜೆ 6ರಿಂದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ಕುಟುಂಬದ ಮೂಲಗಳು ತಿಳಿಸಿವೆ.

‘ಕುಟುಂಬದ ಸದಸ್ಯರು ಕಲಬುರ್ಗಿ ಹೊರವಲಯದ ನಾಗನಹಳ್ಳಿಯಲ್ಲಿರುವ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲು ತೀರ್ಮಾನಿಸಿದ್ದಾರೆ. ಆದರೆ, ಧರ್ಮಸಿಂಗ್ ಅವರ ಜನ್ಮ ಸ್ಥಳವಾದ ನೆಲೋಗಿಯ ಜನರು ನೆಲೋಗಿಯಲ್ಲೇ ಅಂತ್ಯಸಂಸ್ಕಾರ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕು ಎಂಬುದನ್ನು ಇನ್ನಷ್ಟೇ ನಿರ್ಧರಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT