ರಾಯಚೂರು: ಕಾಂಗ್ರೆಸ್‌ಗೆ ಮತ ನೀಡುವಂತೆ ಪ್ರೇರೇಪಿಸಿದ್ದಕ್ಕಾಗಿ ರಾಯಚೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಕೃಷಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಜಾಗೃತಿ ಬಿ.ದೇಶಮಾನೆ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ.

ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರ ವಿರುದ್ಧ ಮತ್ತು ಕಾಂಗ್ರೆಸ್ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷಪಾತದ ಅಭಿಪ್ರಾಯಗಳನ್ನು ದೇಶಮಾನೆ ವ್ಯಕ್ತಪಡಿಸಿದ್ದಾರೆ ಎನ್ನುವ ದೂರನ್ನು ಆಧರಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ. ಬಗಾದಿ ಗೌತಮ್ ವಿಚಾರಣೆ ನಡೆಸಿದ್ದರು.

ದೇಶಮಾನೆ ಪರೋಕ್ಷವಾಗಿ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳಿಂದ ಗೊತ್ತಾಗಿದ್ದು, ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವ ಜಂಬುನಾಥ ಗುತ್ತಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಈಚೆಗೆ ಶಿಫಾರಸು ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.