ಚನ್ನಪಟ್ಟಣ: ‘ಕಾಂಗ್ರೆಸ್ ಪಕ್ಷವನ್ನು ಸೇರುವ ಯಾವುದೇ ಯೋಚನೆ ಇಲ್ಲ’ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಸ್ಪಷ್ಟಪಡಿಸಿದರು.

ಭಾನುವಾರ ತಾಲ್ಲೂಕಿನ ಕೋಡಂಬಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ ಉಹಾಪೋಹ’ ಎಂದರು.

‘ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರು ನನ್ನನ್ನು ಸಂಪರ್ಕಿಸಿ ಪಕ್ಷಕ್ಕೆ ಆಹ್ವಾನ ನೀಡಿರುವುದು ನಿಜ. ಆದರೆ ಸದ್ಯಕ್ಕೆ ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ. ಯಾವುದೇ ಕಾರಣಕ್ಕೂ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಯಾರು ಸಹಾಯ ಮಾಡುತ್ತಾರೋ ಆ ಪಕ್ಷವನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.