ಬೆಂಗಳೂರು: ಶಿಕ್ಷಕರ ರಾಷ್ಟ್ರೀಯ ತರಬೇತಿ ಸಂಸ್ಥೆಯ ಮಾನ್ಯತೆ ಇಲ್ಲದಿದ್ದರೂ ಎಂ.ಇಡಿ ಕೋರ್ಸ್ ಆರಂಭಿಸಿರುವ ತುಮಕೂರು ವಿಶ್ವವಿದ್ಯಾಲಯವನ್ನು ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ವಿವಿಯ ರಿಜಿಸ್ಟ್ರಾರ್, ಕುಲಪತಿ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೇರಿದಂತೆ ಇತರ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಆದೇಶಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

‘ಇದು ಬಹಳ ವಿಚಿತ್ರ ವಿಷಯವಾಗಿದೆ. ನೀವು ವಿದ್ಯಾರ್ಥಿಗಳನ್ನು ಹಾಗೂ ಪೋಷಕರನ್ನು ವಂಚಿಸುತ್ತಿದ್ದೀರಿ. ಇಲ್ಲಿ ಏನು ನಡೆಯುತ್ತಾ ಇದೆ ಎಂದೇ ತಿಳಿಯುತ್ತಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಹಾಗೂ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ವಿವಿಯನ್ನು ಪ್ರಶ್ನಿಸಿತು.

ಕೆಲವು ವಿದ್ಯಾರ್ಥಿ ಸಂಘಟನೆಗಳ ಒತ್ತಾಯದ ಮೇರೆಗೆ ಈ ಕ್ರಮ ತೆಗೆದುಕೊಂಡಿರುವ ಬಗ್ಗೆ ವಿವಿ ಪರ ವಕೀಲರು ತಿಳಿಸಿದರು. ಅದಕ್ಕೆ ನ್ಯಾಯಮೂರ್ತಿಗಳು, ‘ಅಂದರೆ ಜನಸಂಖ್ಯೆ ಹೆಚ್ಚಾಗುತ್ತಿದೆ ಎಂದು ಇರುವ ಜನರನ್ನು ಕೊಲ್ಲುವ ಯೋಜನೆ ನಿಮ್ಮದು ಇದ್ದಂತಿದೆ’ ಎಂದರು.

ಇತಿಹಾಸ, ಕನ್ನಡ, ವಾಣಿಜ್ಯ ಸೇರಿದಂತೆ ಒಟ್ಟು ಏಳು ವಿಷಯಗಳ ಸ್ನಾತಕೋತ್ತರ ಕೋರ್ಸ್ಗೆ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚು ಮಾಡಿರುವುದನ್ನು ಪ್ರಶ್ನಿಸಿ ಎಂ.ದೇವರಾಜ ಎನ್ನುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸುತ್ತಿದೆ.

ಪದವಿಪೂರ್ವ ಕಾಲೇಜಿನ ವಿವಿಧ ಕೋರ್ಸ್ಗಳಿಗೆ ಇದೇ ರೀತಿ ಪ್ರವೇಶ ಸಂಖ್ಯೆಯನ್ನು ಹೆಚ್ಚಿಸಿ ಹಿಂದಿನ ಬಾರಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಪೇಚಿಗೆ ಸಿಲುಕಿಸಿದ್ದರೂ, ಈಗ ಸ್ನಾತಕೋತ್ತರ ಪದವಿಗೆ ಇದೇ ರೀತಿ ಮುಂದುವರಿಸುತ್ತಿರುವುದು ಸರಿಯಲ್ಲ ಎನ್ನುವುದು ಅರ್ಜಿದಾರರ ದೂರು.

ನಿಯಮದ ಪ್ರಕಾರ ಪ್ರತಿ ಕೋರ್ಸ್ಗೆ ವಿವಿ ಪ್ರವೇಶ ನೀಡಬೇಕಿರುವ ವಿದ್ಯಾರ್ಥಿಗಳ ಸಂಖ್ಯೆ 34. ಆದರೆ ಈಗ ಅದನ್ನು 44ಕ್ಕೆ ಹೆಚ್ಚಿಸಿದೆ. ಇದರಿಂದ ಹೆಚ್ಚುವರಿ ವಿದ್ಯಾರ್ಥಿಗಳ ಜೊತೆಗೆ, ನಿಯಮಾನುಸಾರ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನೂ ವಿವಿ ತೊಂದರೆಗೆ ಸಿಲುಕಿಸುತ್ತಿದೆ ಎಂದು ಅರ್ಜಿದಾರರ ಪರ ವಕೀಲ ಜಿ.ಎಸ್.ಕಣ್ಣೂರು ಪೀಠದ ಗಮನ ಸೆಳೆದರು.

ಇದೇ ರೀತಿ ವಿಚಾರಣೆ ವೇಳೆ ಎಂ.ಇಡಿ ಪದವಿಯ ಬಗ್ಗೆಯೂ ಅವರು ತಿಳಿಸಿದ ಹಿನ್ನೆಲೆಯಲ್ಲಿ ಪೀಠ ಅದನ್ನು ಗಂಭೀರವಾಗಿ ಪರಿಗಣಿಸಿತು. ಈ ಸಮಸ್ಯೆ ಬಗೆಹರಿಸಲು ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂಬ ಬಗ್ಗೆ ಸಭೆ ಸೇರಿ ಚರ್ಚಿಸಿ ಮುಂದಿನ ವಿಚಾರಣೆ ವೇಳೆ ಕೋರ್ಟ್ಗೆ ತಿಳಿಸುವಂತೆ ಪೀಠ ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.