ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮೈಸೂರಿನಲ್ಲಿ ಜಾರಿಗೊಳಿಸಿರುವ ‘ಜಾಣ ಸಾರಿಗೆ’ ವ್ಯವಸ್ಥೆಗೆ ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ನಿಗಮ (ಹುಡ್ಕೊ) ನೀಡುವ ಅತ್ಯುತ್ತಮ ಸೇವಾ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿಯು ₹ 1 ಲಕ್ಷ ನಗದು ಪುರಸ್ಕಾರ ಒಳಗೊಂಡಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.