ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕಾ ವಸಾಹತು ಅಭಿವೃದ್ಧಿಗೆ‘ಪ್ರಾಧಿಕಾರ’

ಮುಂದಿನ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ: ಸಚಿವ ಯು.ಟಿ. ಖಾದರ್
Last Updated 10 ಜೂನ್ 2019, 20:00 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ವಸಾಹತುಗಳ ಅಭಿವೃದ್ಧಿಗಾಗಿ ‘ಕೈಗಾರಿಕಾ ನಗರ ಪ್ರಾಧಿಕಾರ’ಗಳನ್ನು (ಇಂಡಸ್ಟ್ರಿಯಲ್ ಟೌನ್‌ಶಿಪ್‌ ಅಥಾರಿಟಿ) ಸ್ಥಾಪಿಸಲು ‘ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯಿದೆ –1976’ ಕ್ಕೆ ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.

ಲೆಕ್ಟ್ರಾನಿಕ್‌ ಸಿಟಿಯನ್ನು ಹೊರತುಪಡಿಸಿದರೆ, ರಾಜ್ಯದಲ್ಲಿರುವ ಉಳಿದ ಕೈಗಾರಿಕಾ ವಸಾಹತುಗಳು ಸ್ಥಳೀಯಾಡಳಿತ ಸಂಸ್ಥೆಗಳ ಅಧೀನ ದಲ್ಲಿವೆ. ಪ್ರಾಧಿಕಾರವು ಅಸ್ತಿತ್ವಕ್ಕೆ ಬಂದ ಬಳಿಕ ಮೂಲಸೌಕರ್ಯ ಒದಗಿ ಸುವುದು, ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಅಧಿಕಾರ ಪ್ರಾಧಿಕಾರಕ್ಕೆ ದೊರಕುತ್ತದೆ ಎಂದು ವಿವರಿಸಿದರು.

‘ಈ ಬಗ್ಗೆ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಜೊತೆ ಚರ್ಚಿಸಿ, ತಿದ್ದುಪಡಿಯನ್ನು ಮಸೂದೆಯನ್ನು ಮಂಡಿಸಲಾಗುವುದು. ಪ್ರಾಧಿಕಾರದಲ್ಲಿ ಎಂಟು ಸದಸ್ಯರು ಇರಲಿದ್ದಾರೆ. ಈ ಪೈಕಿ ಐವರು ಸದಸ್ಯರನ್ನು ಸರ್ಕಾರ ನೇಮಕ ಮಾಡಿದರೆ, ಒಬ್ಬರು ಸ್ಥಳೀಯ ವಾಣಿಜ್ಯೋದ್ಯಮ ಸಂಸ್ಥೆಯ ಪ್ರತಿನಿಧಿ, ಇನ್ನೊಬ್ಬರು ಸ್ಥಳೀಯಾಡಳಿತ ಸಂಸ್ಥೆಯ ಪ್ರತಿನಿಧಿ ಹಾಗೂ ಒಬ್ಬರು ಸ್ಥಳೀಯ ಕೈಗಾರಿಕೋದ್ಯಮಿ ಇರುತ್ತಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT