ಬೆಂಗಳೂರು: ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ನಾಲ್ಕು ದಿನಗಳಿಂದ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬಹಿಷ್ಕರಿಸಿದ್ದ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಮುಷ್ಕರವನ್ನು ಕೈಬಿಟ್ಟಿದ್ದಾರೆ.

ಮೌಲ್ಯಮಾಪನ ಕಾರ್ಯ ಮಂಗಳವಾರ ಪುನರಾರಂಭವಾಗಲಿದ್ದು ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರಲ್ಲಿನ ಆತಂಕ ದೂರವಾಗಿದೆ. ಈಗಿನ ಲೆಕ್ಕಾಚಾರದ ಪ್ರಕಾರ ಮೇ 15ರ ಸುಮಾರಿಗೆ ಫಲಿತಾಂಶ ಪ್ರಕಟವಾಗಲಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜಿ.ಕುಮಾರ ನಾಯಕ ಅಧ್ಯಕ್ಷತೆಯ ಸಮಿತಿ, ವೇತನ ತಾರತಮ್ಯ ನಿವಾರಣೆ ಸಂಬಂಧ ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬೇಕು ಎಂಬ ಆಗ್ರಹದೊಂದಿಗೆ ಉಪನ್ಯಾಸಕರು, ಪ್ರಾಂಶುಪಾಲರು ಸೋಮವಾರ ಸಂಜೆ ಮುಷ್ಕರವನ್ನು ಹಿಂದಕ್ಕೆ ಪಡೆದರು.

ಮಂಗಳವಾರ ಶೇ 50ರಷ್ಟು ಉಪನ್ಯಾಸಕರು ಮೌಲ್ಯಮಾಪನಕ್ಕೆ ಹಾಜರಾಗಬಹುದು. ಹಲವು ಉಪನ್ಯಾಸಕರು ದೂರದ ಊರುಗಳಿಗೆ ತೆರಳಿದ್ದು, ಅವರೆಲ್ಲ ಮೌಲ್ಯಮಾಪನ ಕೇಂದ್ರಗಳಿಗೆ ಹಿಂತಿರುಗಲು ಸಮಯ ಬೇಕಾಗುತ್ತದೆ. ಬುಧವಾರ ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತೆ ವಿ.ರಶ್ಮಿ ತಿಳಿಸಿದರು.

`ವೇತನ ತಾರತಮ್ಯ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 13ರಿಂದ ಮೌಲ್ಯಮಾಪನ ಬಹಿಷ್ಕರಿಸಿ ಹೋರಾಟ ನಡೆಸಿದರೂ ಫಲ ಸಿಗಲಿಲ್ಲ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದೆ ಇರುವುದರಿಂದ ನೋವಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯನ್ನುಂಟು ಮಾಡಬಾರದು ಎಂಬ ದೃಷ್ಟಿಯಿಂದ ಯಾವುದೇ ಷರತ್ತುಗಳನ್ನು ವಿಧಿಸದೆ ಮುಷ್ಕರವನ್ನು ಕೈಬಿಡಲಾಗಿದೆ~ ಎಂದು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಸುದ್ದಿಗಾರರಿಗೆ ತಿಳಿಸಿದರು.

`ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತದೆ ಎಂಬ ವಿಶ್ವಾಸವಿಲ್ಲ. ನಾಲ್ಕು ದಿನ ಮುಷ್ಕರ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಸರ್ಕಾರ ಪದೇ ಪದೇ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಇದರಿಂದ ಬೇಸತ್ತು ಮುಷ್ಕರ ಕೈಬಿಟ್ಟಿದ್ದೇವೆ~ ಎಂದು ಪುರ್ಲೆ ಹೇಳಿದರು.

ಫಲಿತಾಂಶ ವಿಳಂಬ: ಈ ಮೊದಲಿನ ವೇಳಾಪಟ್ಟಿ ಪ್ರಕಾರ ಇದೇ 26ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಬೇಕಿತ್ತು. ಆದರೆ ಮುಷ್ಕರದಿಂದಾಗಿ ಫಲಿತಾಂಶ ಪ್ರಕಟವಾಗುವುದು ಸುಮಾರು 15 ದಿನ ವಿಳಂಬವಾಗಲಿದೆ.

ಇದೇ 9ರಿಂದ 12ರವರೆಗೆ ಮೌಲ್ಯಮಾಪನ ನಡೆದಿದ್ದು, ಇದುವರೆಗೆ ಶೇ 20ರಷ್ಟು ಉತ್ತರ ಪತ್ರಿಕೆಗಳ ಮೌಲ್ಯಮಾಪನವಾಗಿದೆ. ಇನ್ನೂ ಶೇ 80ರಷ್ಟು ಮೌಲ್ಯಮಾಪನ ಕಾರ್ಯ ಬಾಕಿ ಇದೆ. ಇದೇ 18ಕ್ಕೆ ಎಲ್ಲ ಉಪನ್ಯಾಸಕರು ಮೌಲ್ಯಮಾಪನ ಕಾರ್ಯಕ್ಕೆ ಹಾಜರಾದರೂ ಪೂರ್ಣಗೊಳ್ಳಲು ಹತ್ತು ದಿನ ಬೇಕಾಗುತ್ತದೆ.

ಅರ್ಥಶಾಸ್ತ್ರ, ಲೆಕ್ಕಶಾಸ್ತ್ರ ಸೇರಿದಂತೆ ಕೆಲವೊಂದು ವಿಷಯಗಳಲ್ಲಿ ಮೌಲ್ಯಮಾಪಕರ ಸಂಖ್ಯೆ ಕಡಿಮೆ ಇದೆ. ಆ ವಿಷಯಗಳ ಮೌಲ್ಯಮಾಪನ ಮೇ 5ರವರೆಗೂ ನಡೆಯಲಿದೆ. ಇದಾದ ನಂತರ ಅಂಕಗಳ ಕ್ರೋಡೀಕರಣಕ್ಕೆ ಹತ್ತು ದಿನ ಬೇಕಾಗುತ್ತದೆ. ಇದೆಲ್ಲವನ್ನು ಗಮನಿಸಿದರೆ ಮೇ 15ರ ಸುಮಾರಿಗೆ ಫಲಿತಾಂಶ ಪ್ರಕಟವಾಗಬಹುದು ಎಂದು ರಶ್ಮಿ ತಿಳಿಸಿದರು.

ಸಹಾಯಕ ಮೌಲ್ಯಮಾಪಕರು ನಿತ್ಯ 24 ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಬೇಕು. ಮುಷ್ಕರದಿಂದಾಗಿ ಮೌಲ್ಯಮಾಪನ ಕಾರ್ಯ ತಡವಾಗಿದ್ದರೂ, 24ಕ್ಕಿಂತ ಹೆಚ್ಚಿನ ಪತ್ರಿಕೆಗಳನ್ನು ನೀಡುವುದಿಲ್ಲ. ನಿಗದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಿಕೆಗಳನ್ನು ನೀಡುವುದರಿಂದ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಹೆಚ್ಚಿನ ಪತ್ರಿಕೆಗಳನ್ನು ನೀಡುವುದಿಲ್ಲ ಎಂದು ಅವರು ಹೇಳಿದರು.

ಒಟ್ಟು 37 ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ 15,600 ಉಪನ್ಯಾಸಕರನ್ನು ನಿಯೋಜಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಕಾಲೇಜು ಉಪನ್ಯಾಸಕರು ಮುಷ್ಕರ ನಡೆಸಿದ ಸಂದರ್ಭದಲ್ಲಿ ಖಾಸಗಿ ಅನುದಾನರಹಿತ ಕಾಲೇಜುಗಳ ಉಪನ್ಯಾಸಕರು ಮೌಲ್ಯಮಾಪನಕ್ಕೆ ಹಾಜರಾಗಿದ್ದರು. ಆದರೆ ಅವರ ಸಂಖ್ಯೆ ಕಡಿಮೆ ಇದ್ದ ಪರಿಣಾಮ ಹೆಚ್ಚಿನ ಪ್ರಯೋಜನವಾಗಿಲ್ಲ.

ಸಂಧಾನ ಸಭೆ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ಸಮ್ಮುಖದಲ್ಲಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳು ಮತ್ತು ವಿಧಾನ ಪರಿಷತ್ತಿನ ಸದಸ್ಯರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

ಇದೇ 19ರಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಉಪನ್ಯಾಸಕರ ಸಂಘದ ಪದಾಧಿಕಾರಿಗಳ ಸಭೆ ಕರೆದಿದ್ದು, ಅಲ್ಲಿ ಎಲ್ಲವನ್ನೂ ಸುದೀರ್ಘವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು. ತಕ್ಷಣ ಮುಷ್ಕರ ಕೈಬಿಟ್ಟು, ಮೌಲ್ಯಮಾಪನಕ್ಕೆ ಹಾಜರಾಗಿ ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಇಷ್ಟಾದರೂ ಮುಷ್ಕರ ಕೈಬಿಡುವ ಬಗ್ಗೆ ಸಭೆಯಲ್ಲಿ ಸಂಘದ ಪ್ರತಿನಿಧಿಗಳು ಸ್ಪಷ್ಟ ಭರವಸೆ ನೀಡಲಿಲ್ಲ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಮ್ಮುಖದಲ್ಲಿ ಸಂಜೆ ಶಾಸಕರ ಭವನದಲ್ಲಿ ಸಭೆ ನಡೆಸಿದ ಪದಾಧಿಕಾರಿಗಳು, ಒಲ್ಲದ ಮನಸ್ಸಿನಿಂದಲೇ ಮುಷ್ಕರ ಕೈಬಿಡುವ ನಿರ್ಧಾರವನ್ನು ಪ್ರಕಟಿಸಿದರು. ದೊರೆಸ್ವಾಮಿ ಅವರು ಕಾಗೇರಿ ಅವರೊಂದಿಗೆ ಚರ್ಚೆ ನಡೆಸಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಸೋಮವಾರ ಬೆಳಿಗ್ಗೆಯಿಂದ ಸಂಜೆವರೆಗೂ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸಿದ ಉಪನ್ಯಾಸಕರು, ಪ್ರಾಂಶುಪಾಲರು ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಲ್.ಬೈರಪ್ಪ ಅವರೂ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ಸೂಚಿಸಿ, ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಕಾಗೇರಿ ಅವರು ತಮ್ಮ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಬಸವರಾಜ ಹೊರಟ್ಟಿ, ಪುಟ್ಟಣ್ಣ, ಗಣೇಶ್ ಕಾರ್ಣಿಕ್, ಮರಿತಿಬ್ಬೇಗೌಡ, ಪಿ.ವಿ.ಕೃಷ್ಣಭಟ್, ಅರುಣ್ ಶಹಾಪುರ, ವೈ.ಎ. ನಾರಾಯಣಸ್ವಾಮಿ, ಗೋ. ಮಧುಸೂದನ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.