ಬೆಂಗಳೂರು: ಪ್ರದೇಶ ಯುವ ಕಾಂಗ್ರೆಸ್ ಸಮಿತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪ್ರಿಯಾಂಕ ಖರ್ಗೆ ಪರ ನೀತಿ ಸಂಹಿತೆ ಉಲ್ಲಂಘಿಸಿ ಪಕ್ಷದ ಮುಖಂಡರೇ ಪ್ರಚಾರ ಮಾಡುತ್ತಿದ್ದಾರೆ ಎಂದು ವರಿಷ್ಠರಿಗೆ ಯುವ ಕಾಂಗ್ರೆಸ್‌ನ ಕೆಲವರು ದೂರು ನೀಡಿದ್ದಾರೆ.

ಪ್ರಿಯಾಂಕ ಪರ ಅವರ ತಂದೆ, ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಬೆಂಬಲಿಗರು ಪ್ರಚಾರ ಮಾಡುತ್ತಿದ್ದಾರೆ. ಇದು ಪಕ್ಷದ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ರಾಜೀವ್ ಸತಾವ್ ಅವರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಯುವ ಕಾಂಗ್ರೆಸ್ ಮುಖಂಡರಾದ ಕೆ.ಸುಧೀಂದ್ರ, ಅಬ್ದುಲ್ ಜಾಕೀರ್ ಮತ್ತು ವಿಜಯಕುಮಾರ್ ಎಂಬುವರು ಇ-ಮೇಲ್ ಮೂಲಕ ದೂರು ದಾಖಲು ಮಾಡಿದ್ದಾರೆ. ಇದರ ಪ್ರತಿ `ಪ್ರಜಾವಾಣಿ~ಗೆ ಲಭ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.