ಬೆಂಗಳೂರು (ಪ್ರಜಾವಾಣಿ ವಾರ್ತೆ): ಕನ್ನಡದ ಖ್ಯಾತ ಚಿತ್ರ ನಿರ್ದೇಶಕ ಡಿ. ರಾಜೇಂದ್ರ ಬಾಬು ಅವರು ತೀವ್ರ ಹೃದಾಯಘಾತದಿಂದ ಬಾನುವಾರ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜೇಂದ್ರ ಬಾಬು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಹೃದಾಯಘಾತವಾದ್ದರಿಂದ ಅವರನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಬು ನಿಧನರಾದರೆಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

35ಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಬಾಬು ನಿರ್ದೇಶಿಸಿದ್ದರು. ತಮಿಳು ತೆಲುಗು ಸೇರಿದಂತೆ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದ್ದರು. ರಾಜೇಂದ್ರ ಬಾಬು ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಹಿರಿಯರು ಮತ್ತು ಕಿರಿಯರು ಕಂಬಂನಿ ಮಿಡಿದಿದ್ದಾರೆ.

ಬಾಬು ಅವರು ಜೀವನದಿ, ಯುಗಪುರುಷ, ರಾಮಾಚಾರಿ, ದಿಗ್ಗಜರು ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳನ್ನು ಕನ್ನಡ ಸಿನಿಮಾರಂಗಕ್ಕೆ ನೀಡಿದ್ದರು. ಇತ್ತೀಚೆಗೆ ಶಿವರಾಜ್ ಕುಮಾರ್ ಅಭಿನಯದ ಆರ್ಯನ್ ಚಿತ್ರವನ್ನು ನಿರ್ದೇಶಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.