ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿನಾಡು ಬಳ್ಳಾರಿಯಲ್ಲಿ ಬಂದ್ ಶಾಂತಿಯುತ

Last Updated 30 ಜುಲೈ 2016, 6:27 IST
ಅಕ್ಷರ ಗಾತ್ರ

ಬಳ್ಳಾರಿ: ಮಹಾದಾಯಿ ತೀರ್ಪು ಖಂಡಿಸಿ ವಿವಿಧ ಸಂಘಟನೆಗಳು ಇಂದು ಕರೆ ನೀಡಿದ್ದ ಕರ್ನಾಟಕ ಬಂದ್‌‌ಗೆ ಗಡಿನಾಡು ಬಳ್ಳಾರಿಯಲ್ಲೂ ಬೆಂಬಲ ವ್ಯಕ್ತವಾಗಿದ್ದು, ಶಾಂತಿಯುತ ಬಂದ್‌ ನಡೆಯುತ್ತಿದೆ.

ವಿವಿಧ ಕನ್ನಡ ಪರ ಸಂಘಟನೆಗಳು ಬೆಳಿಗ್ಗೆಯಿಂದ ರಸ್ತೆ ತಡೆ ನಡೆಸಿದ್ದು, ರೈಲ್ವೆ ನಿಲ್ದಾಣದ ಬಳಿ ಕೆಲ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಅಲ್ಲಲ್ಲಿ ಏನೇನಾಯ್ತು?

ಬಂದ್ ಹಿನ್ನೆಲೆ ಬೆಳಿಗ್ಗೆಯಿಂದ ಸಾರಿಗೆ ಸಂಸ್ಥೆ ಬಸ್‌ಗಳ ಓಡಾಟ ಸ್ಥಗಿತಗೊಂಡಿದೆ. ಖಾಸಗಿ ಬಸ್‌ ಹಾಗೂ ಇತರೆ ವಾಹನಗಳ ಸಂಚಾರ ಎಂದಿನಂತಿತ್ತು. ಇನ್ನು ಶಾಲಾ ಕಾಲೇಜು ಅಂಗಡಿ ಮುಂಗಟ್ಟುಗಳು ಬಂದ್‌ ಆಗಿವೆ. 


ಜಯ ಕರ್ನಾಟಕ ಸಂಘಟನೆಯಿಂದ ಬೈಕ್ ರ್ಯಾಲಿ- ನಗರದ ದುರುಗಮ್ಮ ಗುಡಿಯಿಂದ ರಾಯಲ್ ವೃತ್ತದ ಮೂಲಕ ಮೆರವಣೆಗೆ- ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ- ಗೋವಾ ಸರಕಾರ- ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ

ನಗರದ ರೆಡ್ಡಿ ಬೀದಿಯ ಕರ್ನಾಟಕ ಗೆಳೆಯರ ಬಳಗದ ವತಿಯಿಂದ ಅಂಚೆ ಕಚೇರಿ ಬಳಿ ಪ್ರತಿಭಟನೆ - ನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆ ತಡೆದು ಆಕ್ರೋಶ
ರೈಲು ತಡೆ ಚಳುವಳಿ- ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿ ರೈಲು ತಡೆದ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು- ಕೋಲ್ಹಾಪುರ ಹೈದ್ರಾಬಾದ್ ರೈಲು ತಡೆದ ಕಾರ್ಯಕರ್ತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT