ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕುರಿತು ಉಂಟಾಗಿರುವ ಗೊಂದಲವನ್ನು ಹೈಕಮಾಂಡ್ ಬಗೆಹರಿಸಲಿದೆ ಎಂಬ ವಿಶ್ವಾಸವನ್ನು ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬುದು ಕೆಲ ಶಾಸಕರ ಆಗ್ರಹ. ಇದನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಲೋಕಾಯುಕ್ತ ವರದಿಯಲ್ಲಿ ಯಡಿಯೂರಪ್ಪ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ರಾಜೀನಾಮೆ ಪಡೆಯಲಾಗಿತ್ತು. ಆದರೆ ಸದಾನಂದಗೌಡರ ವಿರುದ್ಧ ಯಾವುದೇ ರೀತಿಯ ಆರೋಪಗಳು ಇಲ್ಲ. ಯಾವ ಕಾರಣಕ್ಕಾಗಿ ಅವರು ರಾಜೀನಾಮೆ ನೀಡಬೇಕು ಎಂದು ಸುದ್ದಿಗಾರರು ಪ್ರಶ್ನಿಸಿದಾಗ ಸಚಿವರು ಸ್ಪಷ್ಟ ಉತ್ತರ ನೀಡಲಿಲ್ಲ.

ಸದಾನಂದಗೌಡ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆ ಬಗ್ಗೆ ನಮ್ಮ ತಕರಾರು ಇಲ್ಲ. ಅವರ ವಿರುದ್ಧ ಮಾತನಾಡುವುದಿಲ್ಲ. ಅವರೊಂದಿಗೆ ಸಚಿವ ಸಂಪುಟ ಸಭೆಯಲ್ಲಿ ಮಾತಿನ ಚಕಮಕಿ ನಡೆದಿಲ್ಲ ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.