ಗುಡಿಬಂಡೆ: ತಾಲ್ಲೂಕಿನ ಸೋಮೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯ ಕಡತಗಳ ಕೊಠಡಿಗೆ ಗುರುವಾರ ಮುಂಜಾನೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ನಡೆದಿದೆ.

ಮುಂಜಾನೆ ಐದು ಗಂಟೆ ಸಮಯದಲ್ಲಿ ಗ್ರಾ.ಪಂ ಕಚೇರಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದವರು ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದಾರೆ.

ಬೆಂಕಿ ನಂದಿಸಲು ಗ್ರಾಮಸ್ಥರು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಚಿಕ್ಕಬಳ್ಳಾಪುರದಿಂದ ಅಗ್ನಿಶಾಮಕದಳದ ವಾಹನ ಬಂದು ಬೆಂಕಿ ನಂದಿಸಿದರೂ; ಕಚೇರಿಯಲ್ಲಿದ್ದ ದಾಖಲೆಗಳು ಸುಟ್ಟು ಬೂದಿಯಾಗಿವೆ.

ಕಚೇರಿಯಲ್ಲಿದ್ದ ರಸೀದಿ ಪುಸ್ತಕ, ಲೆಕ್ಕಪತ್ರ ತಪಾಸಣೆ ವರದಿ, ಕಾಮಗಾರಿ, ವಸತಿ ಯೋಜನೆ, ಸಂಪೂರ್ಣ ಸ್ವಚ್ಛತಾ ಯೋಜನೆ, ಉದ್ಯೋಗ ಖಾತ್ರಿ ಯೋಜನೆ ದಾಖಲೆಗಳು, ಇತರ ಯೋಜನೆಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಸುಟ್ಟು ಕರಕಲಾಗಿವೆ. ಕೆಲ ದಾಖಲೆಗಳು ಅರ್ಧ ಸುಟ್ಟಿವೆ ಎಂದು ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಹುನ್ನಾರ: 13ನೇ ಹಣಕಾಸು ಯೋಜನೆಯಡಿ ಗ್ರಾಮ ಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ. ಇದನ್ನು ಮುಚ್ಚಿ ಹಾಕಲು ಬೆಂಕಿ ಹಾಕಿ ಕಡತಗಳನ್ನು ಸುಡಲಾಗಿದೆ ಎಂದು ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಆದಿನಾರಾಯಣ ರೆಡ್ಡಿ ಆರೋಪಿಸಿದ್ದಾರೆ.

ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಹಿಂದಿನ ಗ್ರಾ.ಪಂ. ಕಾರ್ಯದರ್ಶಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ.
ಡಿ. 16ರಂದು ವಿಶೇಷ ತನಿಖಾ ತಂಡ ಕಡತಗಳ ಪರಿಶೀಲನೆ ಮಾಡುವುದಿತ್ತು. ಈ ಹಿನ್ನೆಲೆಯಲ್ಲಿ ಕೆಲ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ದಾಖಲೆಗಳ ಕೊಠಡಿಗೆ ಬೆಂಕಿ ಹಾಕಿದ್ದಾರೆ ಎಂದು ಪ್ರಾಂತ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ಪಿ.ಲಕ್ಷ್ಮಿನಾರಾಯಣ ದೂರಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಳ್ಳಲು ಸಾಧ್ಯವಿಲ್ಲ. ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲಿಸಿ, ಶಾರ್ಟ್ ಸರ್ಕೀಟ್ ಆಗಿಲ್ಲ ಎಂದಿದ್ದಾರೆ. ವ್ಯವಸ್ಥಿತ ಸಂಚು ರೂಪಿಸಿ ಬೆಂಕಿ ಹಚ್ಚಿದ್ದಾರೆ ಎಂದು ಅವರು ಸಂಶಯ ವ್ಯಕ್ತಪಡಿಸಿದ್ದಾರೆ.

ಆಕ್ರೋಶ: ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಇಂದ್ರೇಶ ಸ್ಥಳಕ್ಕೆ ಬರುತ್ತಿದ್ದಂತೆ ಗ್ರಾಮಸ್ಥರು, ಸದಸ್ಯರು ಹರಿಹಾಯ್ದರು.

‘ನಿಮ್ಮ ಬೇಜವಾಬ್ದಾರಿಯಿಂದಲೇ ಈ ಘಟನೆ ನಡೆದಿದೆ’ಎಂದು ದೂರಿ ಧಿಕ್ಕಾರ ಕೂಗಿದರು.

ಅವ್ಯವಹಾರದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.