ಬೆಂಗಳೂರು: ಜನವರಿ 6ರಿಂದ ವಿಧಾನಮಂಡಲದ ಅಧಿವೇಶನ ನಡೆಸಲು ಸಚಿವ ಸಂಪುಟ ಶುಕ್ರವಾರ ನಿರ್ಧರಿ ಸಿದ್ದು, ಮೊದಲ ದಿನವೇ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡುವರು.
ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಬೆಳಗಾವಿಯಲ್ಲಿ ಸುವರ್ಣಸೌಧದ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಈ ಅಧಿವೇಶನ ವಿಧಾನಸೌಧದಲ್ಲೇ ನಡೆಯಲಿದೆ.