ರಕ್ಷಣೆ, ವಿದೇಶಾಂಗ ವ್ಯವಹಾರ, ಹಣಕಾಸು ಹಾಗೂ ಸಂವಹನಗಳ ಕುರಿತಂತೆ ಇರುವ ಕಾಯ್ದೆಗಳ ಹೊರತಾಗಿ ಇತರ ಯಾವುದೇ ಕಾಯ್ದೆಗಳನ್ನು ಜಮ್ಮು-ಕಾಶ್ಮೀರದಲ್ಲಿ ಜಾರಿಗೆ ತರಬೇಕಾದರೆ ಆ ರಾಜ್ಯದ ಅನುಮತಿ ಅಗತ್ಯ. ಆ ರಾಜ್ಯಕ್ಕೆ ಸಂಬಂಧಿಸಿದಂತೆ ಕಾನೂನನ್ನು ರೂಪಿಸುವ ಅಧಿಕಾರ ಸಂಸತ್ತಿಗೆ ಕೂಡ ಇರುವುದಿಲ್ಲ. ಒಂದು ವೇಳೆ ಕಾನೂನು ರೂಪಿಸಲೇಬೇಕಿದ್ದಲ್ಲಿ, ಅದನ್ನು ರಾಷ್ಟ್ರಪತಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮುಟ್ಟಿಸಿ ಅಲ್ಲಿಯ ವಿಧಾನ ಸಭೆಯಲ್ಲಿ ಮಂಡಿಸಬೇಕು.