ಬೆಂಗಳೂರು: ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಗುರುತಿಸುವುದಕ್ಕೆ ಪೂರಕವಾಗಿ ನಡೆಸಲು ಉದ್ದೇಶಿಸಿರುವ ಜಾತಿವಾರು ಮನೆ–ಮನೆ ಸಮೀಕ್ಷೆಗೆ 2014ರ ಏಪ್ರಿಲ್–ಮೇ ತಿಂಗಳಲ್ಲಿ ಚಾಲನೆ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಎರಡು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ. ಮೊದಲ ಹಂತದ ಸಮೀಕ್ಷೆಯನ್ನು 2014ರ ಏಪ್ರಿಲ್–ಮೇ ಅವಧಿಯಲ್ಲಿ ನಡೆಸುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಎರಡನೇ ಹಂತದ ಸಮೀಕ್ಷೆ ನಂತರದ ದಿನಗಳಲ್ಲಿ ನಡೆಯುತ್ತದೆ. ಮೊದಲ ಹಂತದ ಸಮೀಕ್ಷೆಗೆ ರೂ 14.71 ಕೋಟಿ ವೆಚ್ಚವಾಗುತ್ತದೆ. ಎರಡನೇ ಹಂತದ ಸಮೀಕ್ಷೆಗೆ ರೂ 97.30 ಕೋಟಿ ವೆಚ್ಚವಾಗಲಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಮೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತದೆ. ಈ ಕಾರಣದಿಂದ ಏಪ್ರಿಲ್–ಮೇ ಅವಧಿ ಸೂಕ್ತ ಎಂದು ತೀರ್ಮಾನಿಸಲಾಗಿದೆ. ಉಳಿದಂತೆ ಕಂದಾಯ, ಪೌರಾಡಳಿತ, ನಗರಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ನೌಕರರನ್ನೂ ಬಳಸಿಕೊಳ್ಳಲಾಗುವುದು. 2011ರ ಜನಗಣತಿಯ ಮಾದರಿಯಲ್ಲೇ ಈ ಸಮೀಕ್ಷೆಯೂ ನಡೆಯುತ್ತದೆ ಎಂದರು.

ದೇಶದಾದ್ಯಂತ ಜಾತಿವಾರು ಮನೆ–ಮನೆ ಸಮೀಕ್ಷೆ ನಡೆಸಲು ನಿರ್ಧರಿಸಿದ್ದ ಕೇಂದ್ರ ಸರ್ಕಾರ, ಪ್ರಾಯೋಗಿಕವಾಗಿ ಕರ್ನಾಟಕದಲ್ಲಿ ಅದನ್ನು ನಡೆಸಲು 2005ರಲ್ಲಿ ತೀರ್ಮಾನಿಸಿತ್ತು. 2005ರ ಬಜೆಟ್‌ನಲ್ಲಿ ಸಮೀಕ್ಷೆಗೆ ರಾಜ್ಯದ ಪಾಲಿನ ಹಣವನ್ನೂ ಒದಗಿಸಲಾಗಿತ್ತು. ಆಗಲೇ ಒಟ್ಟು ರೂ 21 ಕೋಟಿಯನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಮೀಕ್ಷೆ ಆರಂಭಕ್ಕಾಗಿ ಬಿಡುಗಡೆ ಮಾಡಲಾಗಿತ್ತು. ಡಾ.ಸಿ.ಎಸ್.ದ್ವಾರಕಾನಾಥ್ ನೇತೃತ್ವದ ಆಯೋಗ ಎರಡು ವರ್ಷಗಳಿಗೂ ಹೆಚ್ಚುಕಾಲ ಪೂರ್ವಸಿದ್ಧತೆ ನಡೆಸಿತ್ತು. ನಂತರ ಬಂದ ಎನ್.ಶಂಕರಪ್ಪ ನೇತೃತ್ವದ ಆಯೋಗವೂ ತಯಾರಿ ಮುಂದುವರಿಸಿತ್ತು. ಆದರೂ, ಈವರೆಗೆ ಸಮೀಕ್ಷೆಗೆ ಚಾಲನೆಯೇ ದೊರೆತಿಲ್ಲ.

‘ಹಿಂದುಳಿದ ವರ್ಗಗಳ ಆಯೋಗದ ಮೇಲುಸ್ತುವಾರಿಯಲ್ಲಿ ಸಮೀಕ್ಷೆ ನಡೆಯುತ್ತದೆ. ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಸ್ಥಾನಗಳು ಖಾಲಿ ಇವೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಶೀಘ್ರದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ’ ಎಂದು ಜಯಚಂದ್ರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.