ಬೆಂಗಳೂರು: ಚಿತ್ರನಟಿ ಪೂಜಾ ಗಾಂಧಿ ಜೆಡಿಎಸ್ ಸೇರಿದ ಬೆನ್ನಲ್ಲೇ ಮತ್ತೊಬ್ಬ ನಟಿ ಮಾಳವಿಕಾ ಅವಿನಾಶ್ ಶುಕ್ರವಾರ ಜೆಡಿಎಸ್ಗೆ ಸೇರ್ಪಡೆಯಾದರು.

ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಮಾಳವಿಕಾ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು. ಮಾಳವಿಕಾ ಪತಿ-ನಟ ಅವಿನಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

`ಮೊದಲಿನಿಂದಲೂ ಜೆಡಿಎಸ್ ಬಗ್ಗೆ ಒಲವಿತ್ತು. ನಿರ್ದೇಶಕ ಟಿ.ಎನ್.ಸೀತಾ ರಾಂ ಪ್ರೇರಣೆ ಮತ್ತು ದೇವೇಗೌಡರ ಕಾರ್ಯವೈಖರಿ ಇಷ್ಟವಾದ್ದರಿಂದ ಈ ಪಕ್ಷವನ್ನು ಆಯ್ಕೆ ಮಾಡಿಕೊಂಡೆ ಎಂದು ಅವರು ಹೇಳಿದರು.

ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವ ಯೋಚನೆ ಮಾಡಿಲ್ಲ. ಪಕ್ಷದ ಸಂಘಟನೆಯಲ್ಲಿ ತೊಡಗುತ್ತೇನೆ. ಚುನಾವಣೆಗೆ ಸ್ಪರ್ಧಿಸುವ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದು ಕೊಳ್ಳುತ್ತೇನೆ~ ಎಂದು ಮಾವಳಿಕಾ ಹೇಳಿದರು.
ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ, ಮಾಜಿ ಸಚಿವ ಆರ್.ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.