ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ಅವರು ಜಾಮೀನು ಕೋರಿ ಬುಧವಾರ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದಾರೆ.
ಎಸಿಎಂಎಂ ನ್ಯಾಯಾಲಯ ಮಂಗಳವಾರ ಜಾಮೀನು ನೀಡಲು ನಿರಾಕರಿಸಿರುವ ಕ್ರಮವನ್ನು ಅವರು ಸೆಷನ್ಸ್ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.
ಇನ್ನೂ ಅಸ್ವಸ್ಥ: ನಟ ದರ್ಶನ್ ತೂಗುದೀಪ ಅವರ ಆರೋಗ್ಯ ಸ್ಥಿತಿ ಇನ್ನೂ ಸುಧಾರಿಸಿಲ್ಲ ಎಂದು ರಾಜೀವ್ಗಾಂಧಿ ಎದೆ ರೋಗಗಳ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.