ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್ ಅವರು ನಿಧನರಾಗಿದ್ದು, ಅವರ ಇಲ್ಲಿನ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಧರ್ಮ ಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಇಂದು ಬೆಳಿಗ್ಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಾವೇರಿ ಜಿಲ್ಲೆಗೆ ತೆರಳಿದ್ದ ಸಿದ್ದರಾಮಯ್ಯ ಅವರು, ಧರ್ಮಸಿಂಗ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಕಾಗಿನೆಲೆಯಲ್ಲಿ ಆಯೋಜಿಸಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೆಂಗಳೂರಿಗೆ ಹಿಂದಿರುಗಿದರು.
ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದೆ pic.twitter.com/5AWxt2kHjU