ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2016ನೇ ಸಾಲಿನ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ನಾಗೇಶ ಹೆಗಡೆ ಸೇರಿ ಐವರು ಭಾಜನರಾಗಿದ್ದಾರೆ.

ವಿಮರ್ಶಕಿ ಎಚ್.ಎಸ್. ಶ್ರೀಮತಿ, ವಿಮರ್ಶಕ ಪ್ರೊ.ಓ.ಎಲ್. ನಾಗಭೂಷಣಸ್ವಾಮಿ, ಕಥೆಗಾರ ಬಸವರಾಜು ಕುಕ್ಕರಹಳ್ಳಿ ಮತ್ತು ಕಾದಂಬರಿಕಾರ ಬಾಳಾಸಾಹೇಬ ಲೋಕಾಪುರ ಅವರು ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಪ್ರಶಸ್ತಿಯು ₹ 50 ಸಾವಿರ ನಗದು ಹಾಗೂ ಪ್ರಮಾಣ ಪತ್ರ ಒಳಗೊಂಡಿದೆ. ಫೆ. 7ರಂದು ಸಂಜೆ 5 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅದೇ ದಿನ ಬೆಳಿಗ್ಗೆ 10.30ಕ್ಕೆ ಗೌರವ ಪ್ರಶಸ್ತಿ ಪುರಸ್ಕೃತರ ಸಾಹಿತ್ಯ ಕುರಿತ ವಿಚಾರಸಂಕಿರಣ ಏರ್ಪಡಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷೆ ಮಾಲತಿ ಪಟ್ಟಣಶೆಟ್ಟಿ ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

2015ರ ವರ್ಷದ ಬಹುಮಾನಕ್ಕೆ 16 ಪ್ರಕಾರದ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಅವರಿಗೆ ತಲಾ ₹ 25 ಸಾವಿರ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದು ಅವರು ಹೇಳಿದರು.

2015ರ ದತ್ತಿನಿಧಿ ಬಹುಮಾನಕ್ಕೆ 7 ಲೇಖಕರನ್ನು ಆಯ್ಕೆ ಮಾಡಲಾಗಿದೆ. ವರ್ಷದ ಬಹುಮಾನ ಮತ್ತು ದತ್ತಿನಿಧಿ ಬಹುಮಾನಕ್ಕೆ ಶೇ 50 ರಷ್ಟು ಯುವ ಸಾಹಿತಿಗಳು ಮತ್ತು ಮಹಿಳೆಯರನ್ನು ಆಯ್ಕೆ ಮಾಡಿರುವುದು ಈ ಬಾರಿಯ ವಿಶೇಷ ಎಂದೂ ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.