ಬೆಂಗಳೂರು: `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯದಲ್ಲಿ ಶನಿವಾರ ನಾಲ್ಕು ಮಹತ್ವದ ಪ್ರಕರಣಗಳ ವಿಚಾರಣೆ ನಡೆಯಲಿದೆ. ಎಲ್ಲ ಪ್ರಕರಣಗಳೂ ರಾಜ್ಯ ರಾಜಕೀಯದಲ್ಲಿ ಪ್ರಭಾವಿಯಾಗಿರುವ ಮೂರು ಕುಟುಂಬಗಳಿಗೆ ಸಂಬಂಧಿಸಿವೆ.

ವಕೀಲ ಸಿರಾಜಿನ್ ಬಾಷಾ ಸಲ್ಲಿಸಿರುವ ಖಾಸಗಿ ದೂರಿನ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ನಡೆಯಲಿದೆ.

ಮತ್ತೊಬ್ಬ ವಕೀಲ ವಿನೋದ್ಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ವಿರುದ್ಧ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯೂ ಇದೇ ವೇಳೆ ನಡೆಯಲಿದೆ.
ಕುಮಾರಸ್ವಾಮಿ ಅವರ ಸಹೋದರ ಬಾಲಕೃಷ್ಣಗೌಡ ಅವರ ವಿರುದ್ಧ ಭದ್ರಾವತಿ ಮೂಲದ ಎಸ್. ಎನ್. ಬಾಲಕೃಷ್ಣ ಸಲ್ಲಿಸಿರುವ ಖಾಸಗಿ ದೂರು ಕೂಡ ವಿಚಾರಣೆಗೆ ಬರಲಿದೆ.

ಕೆಐಎಡಿಬಿ ಭೂ ಹಗರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವೈದ್ಯಕೀಯ ಕಾರಣಗಳ ಆಧಾರದಲ್ಲಿ ಜಾಮೀನು ಕೋರಿ ರುವ ಅರ್ಜಿ ಬಗ್ಗೆ ಲೋಕಾಯುಕ್ತ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸುವ ಆಕ್ಷೇಪಣೆ ಬಗ್ಗೆಯೂ ವಿಚಾರಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.