ಬೆಂಗಳೂರು: ಮಹಾನಗರ ಪಾಲಿಕೆಗಳನ್ನು ಹೊರತುಪಡಿಸಿ, ನಗರಸಭೆ ಸೇರಿದಂತೆ ಇತರ ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಜಾಗಗಳಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಬಡವರ ಮನೆಗಳನ್ನು (ಆಶ್ರಯ ಮಾದರಿ ಮನೆಗಳು) ಸಕ್ರಮಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಅಧಿಕಾರಿಗಳ ಮಟ್ಟದಲ್ಲಿ ಸಭೆ ಕೂಡ ನಡೆದಿದೆ.

ಗ್ರಾಮೀಣ ಪ್ರದೇಶಗಳ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಸಂಬಂಧದ ಮಸೂದೆಗೆ ವಿಧಾನಮಂಡಲ ಅಧಿವೇಶನದಲ್ಲಿ ಇತ್ತೀಚೆಗೆ ಒಪ್ಪಿಗೆ ನೀಡಲಾಗಿದೆ. ಆ ಸಂದರ್ಭದಲ್ಲಿ ನಗರ ಪ್ರದೇಶಗಳಲ್ಲಿನ ಬಡ ಜನರಿಗೂ ಈ ರೀತಿಯ ಅವಕಾಶ ಕಲ್ಪಿಸಬೇಕು ಎಂಬ ಕೂಗು ಕೇಳಿಬಂದಿತ್ತು.

ಆ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೆ.ಎಸ್. ಈಶ್ವರಪ್ಪ ಇತ್ತೀಚೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.

ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಭೂಮಿ ಬೆಲೆ ಹೆಚ್ಚಾಗಿದೆ. ಅಂತಹ ಕಡೆ ಅಕ್ರಮಗಳನ್ನು ಸಕ್ರಮ ಮಾಡುವುದು ಕಷ್ಟ. ಹೀಗಾಗಿ ಪಾಲಿಕೆಗಳನ್ನು ಇದರಿಂದ ಹೊರತುಪಡಿಸಲಾಗಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಸರ್ಕಾರಿ ಜಾಗಗಳಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡವರಿಂದ ದಂಡ ವಸೂಲಿ ಮಾಡಿ, ಹಕ್ಕುಪತ್ರಗಳನ್ನು ನೀಡುವ ಬಗ್ಗೆ ನಿರ್ಧರಿಸಲಾಗಿದೆ.

ಮುಖ್ಯ ಕಾರ್ಯದರ್ಶಿ ಅವರು ಅಧಿಕಾರಿಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಬಳಿಕ ಸಚಿವ ಸಂಪುಟ ಸಭೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.