ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಜಾತಿಯ ಪ್ರವರ್ಗ ನಮೂದಿಸಿರುವುದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ `ಪ್ರವರ್ಗ~ವನ್ನು ಅಳಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆಯನ್ನು ನೀಡಿದೆ.

ಇದೇ 15ರಿಂದ ಪರೀಕ್ಷೆ ಆರಂಭವಾಗಲಿದ್ದು, ಈಗಾಗಲೇ ಪ್ರವೇಶ ಪತ್ರಗಳನ್ನು ಕಾಲೇಜುಗಳಿಗೆ ಕಳುಹಿಸಲಾಗಿದೆ. ಇದುವರೆಗೆ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ನೀಡದೆ ಇದ್ದರೆ `ಪ್ರವರ್ಗದ ಕಾಲಂ~ ಅನ್ನು ವೈಟ್ನರ್ ಮೂಲಕ ಅಳಿಸುವಂತೆ ಸೂಚಿಸಲಾಗಿದೆ.

ಒಂದು ವೇಳೆ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ನೀಡಿದ್ದರೆ, ಪರೀಕ್ಷೆಗೆ ಹಾಜರಾಗುವ ಮೊದಲ ದಿನವೇ ವಿದ್ಯಾರ್ಥಿಗಳಿಂದ ಪ್ರವೇಶ ಪತ್ರಗಳನ್ನು ಪಡೆದು ಪ್ರವರ್ಗದ ಕಾಲಂ ಅಳಿಸುವಂತೆ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಪರೀಕ್ಷೆ) ಎ.ಎಚ್. ಮಟ್ಟೂರ್ ಅವರು `ಪ್ರಜಾವಾಣಿ~ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.