ಬೆಂಗಳೂರು: ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ವಿಮ್ಸನ ವಿಧಿವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿನಾಯಕ ಪ್ರಸನ್ನ ಅವರನ್ನು ಸಿಐಡಿ ಪೊಲೀಸರು ಗುರುವಾರ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ.

ತಲೆಮರೆಸಿಕೊಂಡಿದ್ದ ಪ್ರಸನ್ನ ಅವರು ಬಳ್ಳಾರಿಯ ನ್ಯಾಯಾಲಯಕ್ಕೆ ಶರಣಾಗಿದ್ದರು. ಸಿಐಡಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಹನ್ನೊಂದು ದಿನಗಳ ಕಾಲ ಅವರನ್ನು ವಶಕ್ಕೆ ಪಡೆದಿದ್ದರು. ಪೊಲೀಸ್ ಬಿಗಿ ಭದ್ರತೆಯಲ್ಲಿ ಅವರನ್ನು ನಗರದ ಸಿಐಡಿ ಕೇಂದ್ರ ಕಚೇರಿಗೆ ಮಧ್ಯಾಹ್ನ ಎರಡು ಗಂಟೆಗೆ ಕರೆ ತರಲಾಯಿತು.

`ಪ್ರಕರಣದ ಪ್ರಮುಖ ಆರೋಪಿ ಪ್ರಸನ್ನ ಅವರನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆಗೆ ಒಳಪಡಿಸಲಾಗುತ್ತದೆ. ವಿಚಾರಣೆಯ ನಂತರ ಈ ಅಕ್ರಮದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಸಾಕ್ಷ್ಯಗಳನ್ನು ಕಲೆ ಹಾಕಲೂ ಸಹಾಯವಾಗಲಿದೆ. ಉಳಿದ ಆರೋಪಿಗಳನ್ನು ವಶಕ್ಕೆ ಪಡೆಯುವ ಅಗತ್ಯ ಇಲ್ಲ~ ಎಂದು ಸಿಐಡಿ ಡಿಜಿಪಿ ಶಂಕರ ಬಿದರಿ ಅವರು `ಪ್ರಜಾವಾಣಿ~ಗೆ ತಿಳಿಸಿದರು.

ಮೂವರು ವೈದ್ಯರು ಹಾಗೂ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯ ರ್ಯಾಂಕ್ ಗಳಿಸಿದ್ದ ಒಂಬತ್ತು ವಿದ್ಯಾರ್ಥಿಗಳು ಸೇರಿದಂತೆ 18 ಮಂದಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.