ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಸ್ಯಾಚೆಟ್ ಗುಟ್ಕಾ ನಿಷೇಧ ಪರಿಶೀಲನೆಗೆ ಆಗ್ರಹ

Last Updated 14 ಫೆಬ್ರುವರಿ 2011, 17:55 IST
ಅಕ್ಷರ ಗಾತ್ರ

ಬೆಂಗಳೂರು: ಪ್ಲಾಸ್ಟಿಕ್ ಸ್ಯಾಚೆಟ್‌ಗಳಲ್ಲಿ ಗುಟ್ಕಾ ಮಾರಾಟ ನಿಷೇಧಿಸಿರುವುದನ್ನು ಮರು ಪರಿಶೀಲಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಅಡಿಕೆ ಬೆಳೆಗಾರರ ನಿಯೋಗವನ್ನು ನವದೆಹಲಿಗೆ ಕರೆದುಕೊಂಡು ಹೋಗಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಸೋಮವಾರ ಇಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜ್ಯದ ಅಡಿಕೆ ಬೆಳೆಗಾರರ ನಿಯೋಗ ಮತ್ತು ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಯಡಿಯೂರಪ್ಪ ಅವರು ಈ ಭರವಸೆ ನೀಡಿದರು. ಅನಿವಾರ್ಯವಾದರೆ ನಿಷೇಧವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಹೇಳಿದರು.

ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಅಡಿಕೆ ಖರೀದಿಗಾಗಿ ಎಲ್ಲ ಸಹಕಾರ ಸಂಘಗಳಿಗೆ ಕೃಷಿ ಆವರ್ತ ನಿಧಿಯಿಂದ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು. ತಜ್ಞರ ಸಮಿತಿಯ ಶಿಫಾರಸಿನಂತೆ ಉತ್ಪಾದನಾ ವೆಚ್ಚವಾಗಿ ಒಂದು ಕೆ.ಜಿ. ಕೆಂಪು ಅಡಿಕೆಗೆ ರೂ 120 ಮತ್ತು ಬಿಳಿ ಅಡಿಕೆಗೆ ರೂ 90ರಂತೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನಿಗದಿಪಡಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರ ನಿಗದಿಪಡಿಸುವ ಬೆಲೆಯನ್ನು ಆಧರಿಸಿ ರಾಜ್ಯ ಸರ್ಕಾರದಿಂದ ಪ್ರತಿ ಕ್ವಿಂಟಲ್ ಬಿಳಿ ಮತ್ತು ಕೆಂಪು ಅಡಿಕೆಗೆ ರೂ 600 ಪ್ರೋತ್ಸಾಹಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT