ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಸ್ಥಿತಿ: ಸಿ.ಎಂ. ವಿಡಿಯೊ ಸಂವಾದ ನಾಳೆ

Last Updated 13 ಮೇ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ಸ್ಥಿತಿಗತಿಯ ಅವಲೋಕನ ನಡೆಸಲು ಇದೇ 15ರಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಡಿಯೊ ಸಂವಾದ ನಡೆಸಲಿದ್ದಾರೆ.

ಆದರೆ ವಿಧಾನಸಭಾ ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿರುವ ಕಲಬುರ್ಗಿ ಮತ್ತು ಧಾರವಾಡ ಜಿಲ್ಲೆಗಳ ಅಧಿಕಾರಿ
ಗಳನ್ನು ಹೊರತುಪಡಿಸಿ ಈ ಸಂವಾದ ನಡೆಯಲಿದೆ. ಬರ ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ನಿರ್ದೇಶನವನ್ನೂ ನೀಡಲಾಗಿದೆ.

ಜಿಲ್ಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರು ಸಂರಕ್ಷಣೆಗಾಗಿ ಮೇವು ಲಭ್ಯತೆ, ಮೇವು ಬ್ಯಾಂಕ್‌, ಗೋಶಾಲೆ, ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಅನುಷ್ಠಾನದ ಕುರಿತುಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿರುವ ಮುಖ್ಯಮಂತ್ರಿ, ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT