ಬ್ರಹ್ಮಾವರ: ಟೆಂಪೊದಲ್ಲಿ ಜಾನುವಾರು ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಿದ ಘಟನೆ ಬ್ರಹ್ಮಾವರದ ಕೊಕ್ಕರ್ಣೆ ಸಮೀಪದ ಕೆಂಜೂರಿನಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ.

ಕೆಂಜೂರಿನ ಪಾದೆಮಠದ ನಿವಾಸಿ, ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಪ್ರವೀಣ್ ಪೂಜಾರಿ (28) ಕೊಲೆಯಾದವರು. ಪ್ರವೀಣ್ ಜತೆಯಿದ್ದ ಅಕ್ಷಯ್ (22) ಗಾಯಗೊಂಡು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ 18 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಘಟನಾ ವಿವರ: ಪ್ರವೀಣ್ ಪೂಜಾರಿ ಕೆಂಜೂರಿನಲ್ಲಿ ತನ್ನ ಮನೆಯ ಸಮೀಪವೇ ಕೋಳಿ ಫಾರ್ಮ್ ಅನ್ನು ನೋಡಿಕೊಂಡು ಗೂಡ್ಸ್ ಟೆಂಪೋ ಬಾಡಿಗೆ ನಡೆಸುತ್ತಿದ್ದರು. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಸ್ಥಳೀಯ ವಡ್ಡಂಬೆಟ್ಟು ಕೆಂಜೂರು ರಮೇಶ್ ಎಂಬುವರು ಬಾಡಿಗೆ ಇದೆ ಎಂದು ಪ್ರವೀಣ್ ಅವರನ್ನು ಕರೆದುಕೊಂಡು ಹೋಗಿದ್ದರು. ರಾತ್ರಿ ಬಾಡಿಗೆ ಇರುವಾಗ ಜತೆಗೆ ಯಾರನ್ನಾದರೂ ಕರೆದುಕೊಂಡು ಹೋಗುತ್ತಿದ್ದ ಪ್ರವೀಣ್, ಬುಧವಾರ ತನ್ನ ಮನೆ ಸಮೀಪದ ಅಕ್ಷಯ್ ಅವರನ್ನು ಕರೆದೊಯ್ದಿದ್ದರು.

ಮುದ್ದೂರು ಕಡೆಯಿಂದ ಗೂಡ್ಸ್ ವಾಹನದಲ್ಲಿ ನಾಲ್ಕು ದನಗಳನ್ನು ತುಂಬಿಸಿಕೊಂಡು ಬರುತ್ತಿರುವ ಸಂದರ್ಭ ಹಿಂದೂ ಜಾಗರಣ ವೇದಿಕೆಯ ಸುಮಾರು 30 ಕಾರ್ಯಕರ್ತರು ಕಜ್ಕೆ ಎಂಬಲ್ಲಿ ಅಡ್ಡಹಾಕಿ ಪ್ರವೀಣ್ ಮತ್ತು ಅಕ್ಷಯ್ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದಾರೆ.

ನಂತರ ಅವರನ್ನು ಕೆಂಜೂರು ಶಾಲೆಯ ಬಳಿ ಎಸೆದು ಪರಾರಿಯಾಗಿದ್ದರು. ಇದನ್ನು ನೋಡಿದವರು ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ತೀವ್ರವಾಗಿ ಗಾಯಗೊಂಡ ಪ್ರವೀಣ್ ದಾರಿ ಮಧ್ಯದಲ್ಲಿ ಮೃತಪಟ್ಟರು ಎಂದು ಹೇಳಲಾಗಿದೆ.

ತಕ್ಷಣ ಕಾರ್ಯಪ್ರವರ್ತರಾದ ಹೆಬ್ರಿ ಮತ್ತು ಬ್ರಹ್ಮಾವರ ಠಾಣೆ ಪೊಲೀಸರು ರಾತ್ರಿಯೇ 6 ಮಂದಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ರಾಘವೇಂದ್ರ, ಶ್ರೀಕಾಂತ್, ಪ್ರಕಾಶ್, ಸುದೀಪ್, ಪ್ರದೀಪ್, ಗಣೇಶ್, ಸುಖೇಶ್, ಪ್ರಕಾಶ್, ರಾಜೇಶ್, ಪ್ರದೀಪ್ ಸೇರಿದಂತೆ ಈತನಕ ಒಟ್ಟು 18 ಮಂದಿಯನ್ನು ಬಂಧಿಸಲಾಗಿದೆ. ಇವರು ಹಿಂದೂ ಜಾಗರಣಾ ವೇದಿಕೆಯ ಸದಸ್ಯರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ಕೆ.ಟಿ. ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಜೂರು, ಕೊಕ್ಕರ್ಣೆ, ಸಂತೆಕಟ್ಟೆ ಪರಿಸರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಭದ್ರತೆಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಣಕರ್ತರು ಯಾರು?: ಹೆಬ್ರಿ ಸಂತೆಕಟ್ಟೆಯಲ್ಲಿ ಪೆಟ್ರೋಲ್ ಬಂಕ್ ಹೊಂದಿರುವ ಹಿಂದೂ ಜಾಗರಣ ವೇದಿಕೆ ಮುಖಂಡ ಅರವಿಂದ ಸೇರಿಗಾರ ಎಂಬಾತ ತನ್ನ ಸಹಚರ ಪ್ರಕಾಶ್ನೊಂದಿಗೆ ಸೇರಿ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಈತನೊಂದಿಗೆ ಕೊಕ್ಕರ್ಣೆ ಮೊಗವೀರ ಪೇಟೆಯ ಕೆಲವು ಯುವಕರು ಕೈಜೋಡಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅರವಿಂದ ಸೇರಿಗಾರನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಘಟನೆಯಿಂದ ಆಕ್ರೋಶಿತರಾದ ಸ್ಥಳೀಯರು ಗುರುವಾರ ಪೆಟ್ರೋಲ್ ಬಂಕ್ಗೆ ಬೀಗ ಹಾಕಿದ ಘಟನೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.