ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಚಿವ ಸಂಪುಟ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಅವಕಾಶ ಬೇಡ’

ರಾಜ್ಯಪಾಲರ ಭೇಟಿ ಮಾಡಿದ ರೈತ ಮುಖಂಡರ ನಿಯೋಗ
Published 16 ಮೇ 2023, 20:25 IST
Last Updated 16 ಮೇ 2023, 20:25 IST
ಅಕ್ಷರ ಗಾತ್ರ

ಬೆಂಗಳೂರು: ‘ಸಕ್ಕರೆ ಕಾರ್ಖಾನೆ ಮಾಲೀಕರನ್ನು ಹೊಸ ಸಚಿವ ಸಂಪುಟಕ್ಕೆ ಸೇರುವುದನ್ನು ತಪ್ಪಿಸಿ, ರಾಜ್ಯದ 30 ಲಕ್ಷ ರೈತರ ಬದುಕು ರಕ್ಷಿಸಬೇಕು’ ಎಂದು ಕೋರಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರಿಗೆ ರೈತ ಮುಖಂಡರು ಮಂಗಳವಾರ ಮನವಿ ಸಲ್ಲಿಸಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ನೇತೃತ್ವದ ನಿಯೋಗವು ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿತು.

‘ರಾಜ್ಯದ 78 ಸಕ್ಕರೆ ಕಾರ್ಖಾನೆಗಳಿಗೆ ಎಲ್ಲ ರಾಜಕೀಯ ಪಕ್ಷಗಳಲ್ಲಿರುವ ಶಾಸಕರೇ ಮಾಲೀಕರಿದ್ದಾರೆ. ಯಾವುದೇ ಸರ್ಕಾರ ಬಂದರೂ ಸಚಿವ ಸಂಪುಟದಲ್ಲಿ ಅವರು ಸೇರುತ್ತಿದ್ದಾರೆ. ಇದರಿಂದ ಕಬ್ಬು ಬೆಳೆಗಾರರಿಗೆ ತೀವ್ರ ಸಂಕಷ್ಟ ಎದುರಾಗುತ್ತಿದೆ’ ಎಂದು ತಿಳಿಸಿದರು.

‘ಹಿ೦ದಿನ ಸರ್ಕಾರವು ಕಬ್ಬಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ (ಎಫ್‌ಆರ್‌ಪಿ)ಯನ್ನು ₹ 150 ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದು ಹೆಚ್ಚುವರಿ ಹಣ ಪಾವತಿಸದೆ ರೈತರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ’ ಎಂದು ದೂರಿದರು.

‘ಬ್ಯಾಂಕ್‌ಗಳು ಸಿಬಿಲ್ ಸ್ಕೋರ್ ಮಾನದಂಡ ಅನುಸರಿಸುತ್ತಿರುವ ಕಾರಣಕ್ಕೆ ರೈತರಿಗೆ ಕೃಷಿ ಸಾಲ ಸಿಗುತ್ತಿಲ್ಲ. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಮಾನದಂಡ ಕೈಬಿಡಲು ಸೂಚನೆ ನೀಡಬೇಕು. ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘದ ನಾರಾಯಣ ರೆಡ್ಡಿ, ಪ್ರಸನ್ನ ಕುಮಾರ್, ಶಿವಕುಮಾರ್, ದೇವಕುಮಾರ, ಹತ್ತಳ್ಳಿ ದೇವರಾಜ್‌, ಬರಡನಪುರ ನಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT