ಸಿಂಧನೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ಮಲ್ಕಾಪುರ ಕ್ಯಾಂಪ್ನಲ್ಲಿ ನಾಗಪ್ಪ ತಂದೆ ಅಯ್ಯಪ್ಪ (38) ಎಂಬ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ 5 ಗಂಟೆಗೆ ನಡೆದಿದೆ.
ಗುರುವಾರ ರಾತ್ರಿ ಸುರಿದ ಆಲಿಕಲ್ಲು ಮಳೆ ಮತ್ತು ಗಾಳಿಯಿಂದಾಗಿ ಎರಡೂ ವರೆ ಎಕರೆ ಜಮೀನಿನಲ್ಲಿ ಬೆಳೆದು ನಿಂತಿದ್ದ ಭತ್ತಕ್ಕೆ ಹಾನಿ ಉಂಟಾಗಿರುವುದರಿಂದ ಸಾವಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ರೈತ ಬೂದಿಹಾಳ ಕ್ಯಾಂಪ್ನ ಗ್ರಾಮೀಣ ಬ್ಯಾಂಕ್ನಲ್ಲಿ ₨70 ಸಾವಿರ ಸಾಲ ಪಡೆದಿದ್ದರು. ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗಪ್ಪ ಅವರಿಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ.