ಮಂಗಳೂರು: ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ನೀಡುತ್ತಿದೆ.
2016ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದ್ದು, ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಆಸಕ್ತರು ನವೆಂಬರ್ 20ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು – 575001 (9845054191,0824– 2410358) ಇಲ್ಲಿಗೆ ಕಳುಹಿಸಬೇಕು.
2016ರಲ್ಲಿ ಪ್ರಕಟವಾದ ಕೃತಿ ಗಳಿಗೆ ಮಾತ್ರ ಅವಕಾಶ. ಲೇಖಕರು ತಮ್ಮ ಕೃತಿಗಳ ನಾಲ್ಕು ಪ್ರತಿಗಳನ್ನು ಕಳುಹಿಸಬೇಕು. ಯಾವುದೇ ಕಾರಣಕ್ಕೂ ಆ ಪ್ರತಿಗಳನ್ನು ಹಿಂತಿರುಗಿಸ ಲಾಗುವುದಿಲ್ಲ ಎಂದು ಸಂಘದ ಅಧ್ಯಕ್ಷ ಉಮರ್ ಯು.ಎಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.