ಸಿಂಧನೂರು (ರಾಯಚೂರು ಜಿಲ್ಲೆ): ‘ರಾಯಚೂರಿನಲ್ಲಿ ಮೇ 8 ರಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನ ಅಭ್ಯಾಸ ವರ್ಗ ನಡೆಯಲಿದೆ’ ಎಂದು ಬ್ರಿಗೇಡ್ನ ರಾಜ್ಯ ಘಟಕದ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರತಿ ಜಿಲ್ಲೆ ಹಾಗೂ ತಾಲ್ಲೂಕು ಘಟಕದ ತಲಾ ಮೂವರಂತೆ 1,300ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಳ್ಳುವರು. ಅಲ್ಲೇ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ’ ಎಂದರು.