ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ರಾಜವಂಶಕ್ಕೆ ಶೀಘ್ರವೇ ಸಂತಾನ ಭಾಗ್ಯ

Last Updated 14 ಜೂನ್ 2017, 20:30 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ರಾಜವಂಶಸ್ಥರಲ್ಲಿ ಇದೀಗ ಸಂತಸ ಮೂಡಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ತ್ರಿಷಿಕಾ ಕುಮಾರಿ ದಂಪತಿಗೆ ಮಕ್ಕಳಾಗುವ ಸಂದರ್ಭ ಬಂದಿದೆ.

ಯದುವೀರ ಅವರು ಪ್ರಮೋದಾದೇವಿ ಒಡೆಯರ್‌ ಅವರ ದತ್ತುಪುತ್ರ. ಅವರ ಪತ್ನಿ ತ್ರಿಷಿಕಾ ಗರ್ಭಧರಿಸಿರುವುದು ಕುಟುಂಬದಲ್ಲಿ ಸಂತಸ ಮೂಡಿಸಿದೆ.

ಜನಪದ ಕಥೆಯೊಂದರ ಪ್ರಕಾರ, ‘ಶ್ರೀರಂಗಪಟ್ಟಣದ ರಾಜ ಶ್ರೀರಂಗರಾಯನ ಪತ್ನಿ ಅಲಮೇಲಮ್ಮನ ಶಾಪದಿಂದಾಗಿ ಒಡೆಯರ್‌ ವಂಶದ ಅರಸರಿಗೆ ಮಕ್ಕಳಾಗುತ್ತಿರಲಿಲ್ಲ. ಈಗ ಕುಟುಂಬದವರು ಮಕ್ಕಳ ಭಾಗ್ಯ ಕಾಣುವಂತಾಗಿದೆ.

ದಸರೆ ವೇಳೆಗೆ ಜನನ: ತ್ರಿಷಿಕಾ ಕುಮಾರಿ ಈಗ 4 ತಿಂಗಳ ಗರ್ಭಿಣಿಯಾಗಿದ್ದಾರೆ ಎಂದು ಅರಮನೆ ಜ್ಯೋತಿಷಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ. ದಸರೆ ವೇಳೆಗೆ ಮಗು ಜನಿಸುವ ಸಾಧ್ಯತೆ ಇದೆ.

ಹಿಂದೂ ಸಂಪ್ರದಾಯದ ಪ್ರಕಾರ ಜನನ ಹಾಗೂ ಮರಣವು ಸೂತಕ. ಯಾವುದೇ ಶುಭಕಾರ್ಯ ನಡೆಸುವಂತಿಲ್ಲ. ಆದರೆ, ಸೂತಕವು ರಾಜಕುಟುಂಬಕ್ಕೆ ಅನ್ವಯಿಸದ ಕಾರಣ, ದಸರೆಯು ಎಂದಿನಂತೆ ನಡೆಯಲಿದೆ ಎಂದು ಅವರು ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT