ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲ’: ವಿಶ್ವೇಶತೀರ್ಥ ಸ್ವಾಮೀಜಿ

Last Updated 5 ಜೂನ್ 2018, 19:30 IST
ಅಕ್ಷರ ಗಾತ್ರ

ಮೈಸೂರು: ‘ಪ್ರಧಾನಿ ನರೇಂದ್ರ ಮೋದಿ ಆಡಳಿತ ಪೂರ್ಣ ತೃಪ್ತಿ ತಂದಿಲ್ಲ ಎಂದು ಹೇಳಿದ್ದೇನೆಯೇ ಹೊರತೂ, ಅವರ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.

‘ವಿದೇಶದಿಂದ ಕಪ್ಪುಹಣ ಹೊರತರುವಲ್ಲಿ, ಗಂಗಾ ನದಿ ಶುದ್ಧೀಕರಣ ವಿಚಾರದಲ್ಲಿ ಉತ್ತಮ ಕೆಲಸ ನಡೆದಿಲ್ಲ ಎಂದಿದ್ದೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಹೆಡ್‌ಲೈನ್‌ ಬಂದಿದೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗಬಹುದು ಎಂಬ ಕಾರಣಕ್ಕೆ ಖುದ್ದಾಗಿ ಸ್ಪಷ್ಟೀಕರಣ ನೀಡುತ್ತಿದ್ದೇನೆ‍. ಅಂದು ಮಾತನಾಡುವಾಗ ಮೈಕ್‌ ಇರಲಿಲ್ಲ. ಹೀಗಾಗಿ, ನಾನು ಹೇಳಿದ್ದು ಕೆಲವರಿಗೆ ಸರಿಯಾಗಿ ಕೇಳಿಸದೆ ತಪ್ಪಾಗಿರಬಹುದು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಎಲ್ಲಾ ಪಕ್ಷಗಳೊಂದಿಗೆ ನಾನು ಉತ್ತಮ ಸಂಬಂಧ ಹೊಂದಿದ್ದೇನೆ. ಯಾವುದೇ ಪಕ್ಷ ಒಳ್ಳೆಯ ಕೆಲಸ ಮಾಡಿದರೂ ಅದನ್ನು ಸ್ವಾಗತಿಸುತ್ತೇನೆ. ನಾನು ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಪೀಠಾಧಿಪತಿಗಳು ಸ್ವತಂತ್ರರು, ಪಕ್ಷಾತೀತರು’ ಎಂದರು.

‘ಚುನಾವಣೆಯಲ್ಲಿ ಯಾರಿಗೂ ಬಹುಮತ ಬರದಿದ್ದರೆ, ಸರ್ವಪಕ್ಷಗಳ ಸರ್ಕಾರ ಅಸ್ತಿತ್ವಕ್ಕೆ ಬರಬೇಕು. ಆಗ ಯಾವುದೇ ಅಸ್ಥಿರತೆ ಭಯ ಇರುವುದಿಲ್ಲ. ಇಂತಹ ಪ್ರಯತ್ನಗಳು ಬೇರೆ ಬೇರೆ ದೇಶಗಳಲ್ಲೂ ನಡೆದಿವೆ’ ಎಂದು ಅಭಿಪ್ರಾಯಪಟ್ಟರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT