ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರನ್ನು ಕುರಿತು ಫೇಸ್ಬುಕ್ನಲ್ಲಿ ಅವಹೇಳನ ಮಾಡಿದ ಆರೋಪದ ಮೇಲೆ ಬಾಳು ಸುರೇಶ ಪೂಜಾರಿ ಎಂಬಾತನನ್ನು ಅರೆಬೆತ್ತಲೆಗೊಳಿಸಿ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಭಿರಡಿ ಗ್ರಾಮದಲ್ಲಿ ನಡೆದಿದೆ.

ಈ ಕುರಿತು ರಾಯಬಾಗ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

‘ಕೆಲವರು ಬಂದು ಯುವಕನ ಮೇಲೆ ಆರೋಪ ಮಾಡಿದರು. ಆದರೆ, ಸೂಕ್ತ ದೂರು ನೀಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ, ಅದರ ಸ್ಕ್ರೀನ್ ಶಾಟ್ ತಂದುಕೊಟ್ಟು ದೂರು ಕೊಡಿ ಎಂದು ಹೇಳಿದ್ದೇನೆ. ಯುವಕನ ಕುರಿತು ಹೆಚ್ಚಿನ ಮಾಹಿತಿ ಪಡೆದಿಲ್ಲ, ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ರಾಯಬಾಗ ಠಾಣೆ ಪಿ ಎಸ್ ಐ ಶಿವಕುಮಾರ್ ಮುಚ್ಚಂಗಿ ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.