ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಡಿಜಿಪಿ ಕಚೇರಿ ಪ್ರಥಮ ದರ್ಜೆ ಸಹಾಯಕನಾಗಿದ್ದ ಎನ್.ನರಸಿಂಹಮೂರ್ತಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅವರ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 19ರಂದು ತಿರಸ್ಕರಿಸಿತ್ತು. ಈ ಕುರಿತ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ಪೀಠವು ಬುಧವಾರ ವಿಚಾರಣೆ ನಡೆಸಿತು.
ಈ ವೇಳೆ ಪ್ರತಿವಾದಿಗಳಾದ ವಿಶೇಷ ತನಿಖಾ ತಂಡವು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿತು. ಇದನ್ನು ಮನ್ನಿಸಿದ ನ್ಯಾಯಪೀಠವು ಎಸ್ಐಟಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿ ವಿಚಾರಣೆ ಮುಂದೂಡಿತು.