ಬೆಂಗಳೂರು: ಮಹಿಳೆಯೊಬ್ಬರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರ ಸಮೀಪದ ಗಾಯಿತ್ರಿ ಲೇಔಟ್ನಲ್ಲಿ ಸೋಮವಾರ ಸಂಜೆ ನಡೆದಿದೆ.ವಿಷ್ಣುವರ್ಧನ ಎಂಬುವರ ಪತ್ನಿ ಶ್ರವಂತಿ (28) ಆತ್ಮಹತ್ಯೆ ಮಾಡಿಕೊಂಡವರು. ಅವರ ಮದುವೆಯಾಗಿ ನಾಲ್ಕು ವರ್ಷವಾಗಿತ್ತು ಮತ್ತು ಅವರಿಗೆ ಹರ್ಷವರ್ಧನ ಎಂಬ 11 ತಿಂಗಳ ಮಗುವಿದೆ ಎಂದು ಕೆ.ಆರ್.ಪುರ ಪೊಲೀಸರು ತಿಳಿಸಿದ್ದಾರೆ. ಶ್ರವಂತಿ ಬಿಕಾಂ ಓದಿದ್ದರು.

ಖಾಸಗಿ ಕಂಪೆನಿಯಲ್ಲಿ ಎಂಜಿನಿಯರ್ ಆಗಿದ್ದ ವಿಷ್ಣುವರ್ಧನ ಅವರು ತವರು ಮನೆಯಿಂದ ಹಣ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ಅವರು, ಪತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

`ಅಳಿಯ ಮತ್ತು ಆತನ ಪೋಷಕರು ವರದಕ್ಷಿಣೆ ಹಣಕ್ಕಾಗಿ ಮಗಳಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿಗೆ ಅಳಿಯ ಮತ್ತು ಆತನ ಕುಟುಂಬ ಸದಸ್ಯರೇ ಕಾರಣ~ ಎಂದು ಶ್ರವಂತಿ ತಂದೆ ದಳಪತಿ ಅವರು ದೂರು ಕೊಟ್ಟಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡು ವಿಷ್ಣುವರ್ಧನ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವ್ಯಕ್ತಿ ಸಾವು: ಪಾನಮತ್ತ ವ್ಯಕ್ತಿಯೊಬ್ಬ ಕಟ್ಟಡದ ಒಂದನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ರಾಜಗೋಪಾಲನಗರ ಬಳಿಯ ಚೌಡೇಶ್ವರಿನಗರದಲ್ಲಿ ಮಂಗಳವಾರ ನಸುಕಿನಲ್ಲಿ ನಡೆದಿದೆ.
ಚೌಡೇಶ್ವರಿನಗರ ಎರಡನೇ ಅಡ್ಡರಸ್ತೆ ನಿವಾಸಿ ಶ್ರೀರಾಮಪ್ಪ (30) ಮೃತಪಟ್ಟವರು. ಕಂಪ್ಯೂಟರ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದ ಅವರು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅವರ ಪೋಷಕರು ಕೆ.ಆರ್.ಪುರದಲ್ಲಿ ನೆಲೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀರಾಮಪ್ಪ ಅವರು ಮನೆಯಲ್ಲೇ ಬೆಳಗಿನ ಜಾವ ನಾಲ್ಕು ಗಂಟೆವರೆಗೂ ಮದ್ಯ ಕುಡಿದಿದ್ದಾರೆ. ಆ ನಂತರ ಮನೆಯ ಮಹಡಿಗೆ ಹೋದ ಅವರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಧನ: ಕುಖ್ಯಾತ ರೌಡಿ ನವುಲೆ ಆನಂದ (34) ಸೇರಿದಂತೆ ಒಂಬತ್ತು ಮಂದಿಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ದಾವಣಗೆರೆಯ ನವೀದ್ (28), ಕುಮಾರಸ್ವಾಮಿ ಲೇಔಟ್ನ ದೀಪಕ್ (20), ಸುಬ್ರಹ್ಮಣ್ಯಪುರದ ಸಂಪತ್ಕುಮಾರ್ (19), ಲಕ್ಷ್ಮಿಕಾಂತ್ (19), ಮೋಹನ್ (23), ಗಿರೀಶ್ (22), ತೇಜ (23) ಮತ್ತು ಕೃಷ್ಣಪ್ಪ ಲೇಔಟ್ನ ಶ್ರೀನಿವಾಸ (23) ಇತರೆ ಬಂಧಿತ ಆರೋಪಿಗಳು.

ಆರೋಪಿಗಳು ಜೆ.ಪಿ.ನಗರ 24ನೇ ಮುಖ್ಯರಸ್ತೆ ಮತ್ತು ಸುಬ್ರಹ್ಮಣ್ಯಪುರ ಸಮೀಪ ದರೋಡೆ ಮಾಡಲು ಹೊಂಚು ಹಾಕುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಅವರನ್ನು ಬಂಧಿಸಲಾಯಿತು.ಆರೋಪಿಗಳಿಂದ ಮಾರಕಾಸ್ತ್ರಗಳು ಹಾಗೂ ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.ಪ್ರಕರಣದ ಇತರೆ ಆರೋಪಿಗಳಾದ ರೌಡಿ ರಂಜನ್ ಮತ್ತು ಅಮರ್ ಎಂಬುವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ನವುಲೆ ಆನಂದನ ವಿರುದ್ಧ ಬೆಂಗಳೂರು ಹಾಗೂ ಶಿವಮೊಗ್ಗದ ಠಾಣೆಗಳಲ್ಲಿ ಕೊಲೆ, ಅಪಹರಣ, ಡಕಾಯಿತಿ, ಕೊಲೆ ಯತ್ನ ಸೇರಿದಂತೆ 11 ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಅಲ್ಲದೇ ಶಿವಮೊಗ್ಗದ ಠಾಣೆಯೊಂದರ ರೌಡಿ ಪಟ್ಟಿಯಲ್ಲಿ ಆತನ ಹೆಸರಿದೆ. ಬಂಧಿತರ ವಿರುದ್ಧ ಜೆ.ಪಿ.ನಗರ ಮತ್ತು ಸುಬ್ರಹ್ಮಣ್ಯಪುರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.