ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ ಮಾಡಲಾಗಿರುವ ಹುದ್ದೆಯ ಅಧಿಕಾರ ಸ್ವೀಕರಿಸುವಂತೆ ರೋಹಿಣಿ ಸಿಂಧೂರಿಗೆ ಮೌಖಿಕ ನಿರ್ದೇಶನ

Last Updated 27 ಏಪ್ರಿಲ್ 2018, 9:05 IST
ಅಕ್ಷರ ಗಾತ್ರ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು, ಈಗ ವರ್ಗಾವಣೆ ಮಾಡಲಾಗಿರುವ ಉದ್ಯೋಗ ಮತ್ತು ತರಬೇತಿ ಕೇಂದ್ರದ ಆಯುಕ್ತ ಹುದ್ದೆಯ ಅಧಿಕಾರ ಸ್ವೀಕರಿಸಿ ಕಾರ್ಯ ನಿರ್ವಹಿಸುವಂತೆ ಹೈಕೋರ್ಟ್ ಮೌಖಿಕ ನಿರ್ದೇಶನ ನೀಡಿದೆ.

ತಮ್ಮನ್ನು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದ್ದ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ರೋಹಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಜಿ.ರಮೇಶ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ಇದೇ ವೇಳೆ, ರೋಹಿಣಿ ಅರ್ಜಿಯನ್ನು ವಜಾಗೊಳಿಸಿ ಏ. 17ರಂದು ಸಿಎಟಿ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ. ಅಂತೆಯೇ, ರಾಜ್ಯ ಸರ್ಕಾರ ರೋಹಿಣಿ ಅವರನ್ನು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿ ಮಾರ್ಚ್ 7ರಂದು ಹೊರಡಿಸಿರುವ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

ಮುಂದಿನ ವಿಚಾರಣೆ ವೇಳೆಗೆ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಅನುಸರಿಸುವ ಮಾರ್ಗಸೂಚಿಗಳ ವಿವರ ಸಲ್ಲಿಸುವಂತೆಯೂ ನ್ಯಾಯಪೀಠ ಸರ್ಕಾರಕ್ಕೆ ತಾಕೀತು ಮಾಡಿದೆ.

ವಿಚಾರಣೆಯನ್ನು ಮೇ 30ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT