ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಕಡಿತ

Last Updated 13 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜಧಾನಿ ಹೊರತುಪಡಿಸಿ ರಾಜ್ಯದ ಎಲ್ಲ ಕಡೆ ಸೋಮವಾರದಿಂದ ಅನಿಯಮಿತ ವಿದ್ಯುತ್ ಕಡಿತ ಜಾರಿಯಾಗಿದೆ. ಒಂದೆಡೆ ಜಿಂದಾಲ್ ಘಟಕದಿಂದ ಪೂರೈಕೆಯಾಗುತ್ತಿದ್ದ ವಿದ್ಯುತ್‌ನಲ್ಲಿ 300 ಮೆಗಾವಾಟ್ ಖೋತಾ ಆಗಿದ್ದರೆ, ಮತ್ತೊಂದೆಡೆ ಬೇಡಿಕೆ ಪ್ರಮಾಣ ಹೆಚ್ಚಾಗಿದೆ.

ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಮಾರ್ಚ್‌ವರೆಗೂ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸಾಧ್ಯವಿಲ್ಲ. ಒಂದು ವೇಳೆ ಹೆಚ್ಚುವರಿಯಾಗಿ 500 ಮೆಗಾವಾಟ್ ವಿದ್ಯುತ್ ಖರೀದಿ ಮಾಡಿದರೆ ಪರಿಸ್ಥಿತಿ ಸುಧಾರಿಸಬಹುದು ಎಂದು ಇಂಧನ ಇಲಾಖೆಯ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.

ಬೇಡಿಕೆ ಪ್ರಮಾಣ 170 ದಶಲಕ್ಷ ಯೂನಿಟ್‌ಗೆ ಏರಿದೆ. ಆದರೆ ಈ ಪ್ರಮಾಣದಲ್ಲಿ ವಿದ್ಯುತ್ ನೀಡಲು ಆಗುತ್ತಿಲ್ಲ. ಭಾನುವಾರ 161 ದಶಲಕ್ಷ ಯೂನಿಟ್ ಪೂರೈಕೆಯಾಗಿದೆ.  ಈ ಬಾರಿ ಬೇಡಿಕೆ ಪ್ರಮಾಣ 180 ದಶಲಕ್ಷ ಯೂನಿಟ್‌ಗೆ ಏರುವ ನಿರೀಕ್ಷೆ ಇದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT