ಬೆಂಗಳೂರು: ಪಿಯುಸಿ ನಂತರ ಎಂಜಿನಿಯರಿಂಗ್, ವೈದ್ಯಕೀಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಬಯಸುವವರ ಸಂಖ್ಯೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿದೆ. ಸುಮಾರು ಎರಡು ದಶಕಗಳಿಂದ ಈಚೆಗೆ ಈ ಕ್ಷೇತ್ರದಲ್ಲಿ ಅಗಾಧವಾದ ಬೆಳವಣಿಗೆಯಾಗಿದ್ದು, ಪ್ರತಿ ವರ್ಷ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ. ತಮ್ಮ ಮಕ್ಕಳು ಎಂಜಿನಿಯರ್, ಡಾಕ್ಟರ್ ಆಗಬೇಕು ಎಂದು ಬಯಸುವ ಪೋಷಕರ ಸಂಖ್ಯೆಯೂ ಹೆಚ್ಚುತ್ತಿದೆ.

ಸದ್ಯ ವೈದ್ಯಕೀಯ ಶಿಕ್ಷಣಕ್ಕೆ ಭಾರಿ ಬೇಡಿಕೆ ಇದ್ದು, ಇನ್ನೂ ಒಂದು ಪೀಳಿಗೆಯವರೆಗೆ ಇದೇ ರೀತಿಯ ಬೇಡಿಕೆ ಇರುತ್ತದೆ ಎನ್ನುತ್ತಾರೆ ತಜ್ಞರು. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕು. ಆದರೆ, ರಾಜ್ಯದಲ್ಲಿ ಸದ್ಯಕ್ಕೆ 1,700 ಜನಸಂಖ್ಯೆಗೆ ಒಬ್ಬ ವೈದ್ಯರು ಇದ್ದಾರೆ. ಹೀಗಾಗಿ ಹೊಸ ಕಾಲೇಜುಗಳನ್ನು ತೆರೆಯಲು ಮುಕ್ತವಾಗಿ ಅವಕಾಶ ನೀಡುವುದು, ಸೀಟುಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ವೈದ್ಯರ ಕೊರತೆ ನೀಗಿಸಲು ಕೇಂದ್ರ ಮತ್ತು ರಾಜ್ಯಸರ್ಕಾರ ಮುಂದಾಗಿದೆ. ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ಮೂರೂವರೆ ವರ್ಷದ ಬಳಿಕ ಸ್ನಾತಕೋತ್ತರ ಕೋರ್ಸ್ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡುತ್ತಿದೆ. ಹೀಗಾಗಿ ಸ್ನಾತಕೋತ್ತರ ವಿಭಾಗದಲ್ಲಿ ಸೀಟುಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಎಂಬಿಬಿಎಸ್ ಪದವಿ ಪಡೆದ ನಂತರ ಎಲ್ಲಿ ಬೇಕಾದರೂ ಸ್ವತಂತ್ರವಾಗಿ ವೃತ್ತಿ ಆರಂಭಿಸಬಹುದು. ಇಲ್ಲದಿದ್ದರೆ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯಬಹುದು. ಇದಾದ ಬಳಿಕ ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗೆ ಸೇರಬಹುದು. ಅಲ್ಲದೆ ಸಂಶೋಧನೆ, ಬೋಧನೆಯಲ್ಲಿ ತೊಡಗಿಸಿಕೊಳ್ಳಲು ಹೆಚ್ಚಿನ ಅವಕಾಶಗಳಿವೆ.

ಆರ್ಥಿಕವಾಗಿ ವೈದ್ಯಕೀಯ ಕ್ಷೇತ್ರ ಹೆಚ್ಚು ಲಾಭದಾಯಕವಾಗಿದೆ. ಆಸಕ್ತಿ ಇದ್ದರೆ, ಸ್ವತಂತ್ರವಾಗಿ ಆಸ್ಪತ್ರೆ ತೆರೆಯಬಹುದು. ಇಲ್ಲವೆ ಕಾರ್ಪೋರೆಟ್ ಆಸ್ಪತ್ರೆಗಳಲ್ಲಿ ವೈದ್ಯ ವೃತ್ತಿ ಮಾಡಬಹುದು.

ಇತ್ತೀಚಿನ ವರ್ಷಗಳಲ್ಲಿ 'ಹೆಲ್ತ್ ಟೂರಿಸಂ' ಹೆಚ್ಚು ಜನಪ್ರಿಯವಾಗಿದ್ದು, ‘ಬೆಂಗಳೂರು ಹೆಲ್ತ್ ಟೂರಿಸಂನ ಹಬ್’ ಆಗಿ ಬೆಳೆಯುತ್ತಿದೆ. ವಿದೇಶಗಳಿಂದಲೂ ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚುತ್ತಿದೆ.

ಅರ್ಹತೆ: ಪಿಯುಸಿಯಲ್ಲಿ ಭೌತವಿಜ್ಞಾನ, ರಸಾಯನ ವಿಜ್ಞಾನ ಮತ್ತು ಜೀವವಿಜ್ಞಾನ (ಪಿಸಿಬಿ) ಕಾಂಬಿನೇಷನ್ ತೆಗೆದುಕೊಂಡಿದ್ದು, ಅದರಲ್ಲಿ ಕನಿಷ್ಠ ಶೇ 50ರಷ್ಟು ಅಂಕಗಳನ್ನು ಪಡೆದಿರಬೇಕು. ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ–1, ಪ್ರವರ್ಗ 2ಎ, ಪ್ರವರ್ಗ 2ಬಿ, ಪ್ರವರ್ಗ 3ಎ ಮತ್ತು ಪ್ರವರ್ಗ 3ಬಿಗೆ ಸೇರಿದವರಾದರೆ ಶೇ 40ರಷ್ಟು ಅಂಕಗಳನ್ನು ಪಡೆದಿರಬೇಕು. ಅಂತಿಮವಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ಎನ್ಇಇಟಿ) ಪಡೆದಿರುವ ಅಂಕಗಳನ್ನು ಆಧರಿಸಿ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಅದನ್ನು ಆಧರಿಸಿ ಮೀಸಲಾತಿಗೆ ಅನುಗುಣವಾಗಿ ಸೀಟು ಹಂಚಿಕೆ ಮಾಡಲಾಗುತ್ತದೆ.

ರಾಜ್ಯದಲ್ಲಿ ಸರ್ಕಾರಿ, ಇಎಸ್ಐ, ಡೀಮ್ಡ್ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 8,500 ವೈದ್ಯಕೀಯ ಸೀಟುಗಳು ಲಭ್ಯ ಇವೆ. ಕಾಲೇಜುಗಳಲ್ಲಿನ ಮೂಲಸೌಕರ್ಯಗಳನ್ನು ಆಧರಿಸಿ ಭಾರತೀಯ ವೈದ್ಯಕೀಯ ಮಂಡಳಿ ಪ್ರತಿ ವರ್ಷ ಮಾನ್ಯತೆ ನವೀಕರಣ ಸಂದರ್ಭದಲ್ಲಿ ಸೀಟುಗಳ ಸಂಖ್ಯೆಯನ್ನು ಜಾಸ್ತಿ, ಕಡಿಮೆ ಮಾಡುತ್ತದೆ. ಹೀಗಾಗಿ ಒಟ್ಟಾರೆ ಸೀಟುಗಳ ಸಂಖ್ಯೆಯಲ್ಲಿ ಸ್ವಲ್ಪ ವ್ಯತ್ಯಾಸ ಆಗುತ್ತದೆ. ಆದರೆ, ಕೌನ್ಸೆಲಿಂಗ್ ಆರಂಭಕ್ಕೂ ಮುನ್ನವೇ ಸ್ಪಷ್ಟಚಿತ್ರಣ ಸಿಗಲಿದೆ.

ಕೌನ್ಸೆಲಿಂಗ್: ಕೇಂದ್ರ ಪ್ರೌಢಶಿಕ್ಷಣ ಮಂಡಳಿ ಎನ್ಇಇಟಿ ಪರೀಕ್ಷೆ ನಡೆಸಲಿದೆ. ಬಳಿಕ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಸರ್ಕಾರಿ ಕಾಲೇಜುಗಳಲ್ಲಿ ಶೇ 15ರಷ್ಟು ಸೀಟುಗಳನ್ನು ಅಖಿಲ ಭಾರತ ಕೋಟಾ ಮೂಲಕ ತುಂಬಲಾಗುತ್ತದೆ. ಅದಕ್ಕೆ ರಾಷ್ಟ್ರಮಟ್ಟದ ಮೆರಿಟ್ ಪಟ್ಟಿಯನ್ನು ಪರಿಗಣಿಸಲಾಗುತ್ತದೆ. ಉಳಿದ ಶೇ 85ರಷ್ಟು ಸೀಟುಗಳು ಹಾಗೂ ಖಾಸಗಿ ಕಾಲೇಜುಗಳಲ್ಲಿನ ಸೀಟುಗಳನ್ನು ರಾಜ್ಯ ಮಟ್ಟದ ಮೆರಿಟ್ ಪಟ್ಟಿಯನ್ನು ಆಧರಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೌನ್ಸೆಲಿಂಗ್ ಮೂಲಕ ಸೀಟು ಹಂಚಿಕೆ ಮಾಡುತ್ತದೆ. ಕಳೆದ ವರ್ಷ ಖಾಸಗಿ ಕಾಲೇಜುಗಳಲ್ಲಿ ಶೇ 40ರಷ್ಟು ಸೀಟುಗಳನ್ನು ಸರ್ಕಾರಿ ಕೋಟಾ ಮೂಲಕ ಹಾಗೂ ಶೇ 40ರಷ್ಟು ಸೀಟುಗಳನ್ನು ಕಾಮೆಡ್-ಕೆ ಕೋಟಾ ಮೂಲಕ ತುಂಬಲಾಗಿತ್ತು. ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ಕಾಲೇಜುಗಳಲ್ಲಿ ಶೇ 25ರಷ್ಟು ಸೀಟುಗಳನ್ನು ಸರ್ಕಾರಿ ಕೋಟಾ ಮೂಲಕ ಸೀಟು ಹಂಚಲಾಗಿತ್ತು.

ಶುಲ್ಕ: ಸರ್ಕಾರಿ ಮತ್ತು ಕಾಮೆಡ್–ಕೆ ಕೋಟಾ ಸೀಟುಗಳ ಶುಲ್ಕವನ್ನು ಸರ್ಕಾರಿ ನಿಗದಿಪಡಿಸುತ್ತದೆ. ಅನಿವಾಸಿ ಭಾರತೀಯ (ಎನ್‌ಆರ್‌ಐ) ಮತ್ತು ಆಡಳಿತ ಮಂಡಳಿ ಕೋಟಾದ ಸೀಟುಗಳ
ಶುಲ್ಕವನ್ನು ಆಯಾ ಕಾಲೇಜುಗಳು ನಿಗದಿ ಮಾಡುತ್ತವೆ. ಈ ವರ್ಷದ ಸೀಟುಗಳ
ಸಂಖ್ಯೆ ಮತ್ತು ಶುಲ್ಕ ಇನ್ನೂ ನಿಗದಿಯಾಗಿಲ್ಲ. ಜೂನ್‌ನಲ್ಲಿ ಕೌನ್ಸೆಲಿಂಗ್ ನಡೆಯಲಿದ್ದು, ಅದಕ್ಕೂ ಮುನ್ನ ಶುಲ್ಕ ಎಷ್ಟು ಎಂಬುದು ಇತ್ಯರ್ಥವಾಗಲಿದೆ.

ಎಂಜಿನಿಯರಿಂಗ್: ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಮೊದಲಿನಿಂದಲೂ ಮುಂಚೂಣಿಯಲ್ಲಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಸೀಟು ಹಂಚಿಕೆ ಮಾಡುವ ಪದ್ಧತಿ ಇಡೀ ದೇಶಕ್ಕೆ ಮಾದರಿಯಾಗಿದೆ. ಪಿಯುಸಿಯಲ್ಲಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಸಿಇಟಿ ತೆಗೆದುಕೊಳ್ಳುವ ಮೂಲಕ ಮೆರಿಟ್ ಆಧಾರದ ಮೇಲೆ ಎಂಜಿನಿಯರಿಂಗ್‌ಗೆ ಪ್ರವೇಶ ಪಡೆಯಬಹುದು.

ಸರ್ಕಾರಿ, ಅನುದಾನಿತ, ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಸೀಟುಗಳು ಲಭ್ಯ ಇವೆ. ಖಾಸಗಿ ಕಾಲೇಜುಗಳಲ್ಲಿ ಶೇ 45ರಷ್ಟು ಸೀಟುಗಳನ್ನು ಸರ್ಕಾರಿ ಕೋಟಾ ಮೂಲಕ ಹಾಗೂ ಶೇ 30ರಷ್ಟು ಸೀಟುಗಳನ್ನು ಕಾಮೆಡ್-ಕೆ ಕೋಟಾ ಮೂಲಕ ಕಳೆದ ವರ್ಷ ತುಂಬಲಾಗಿತ್ತು. ಬಹುಶಃ ಇದೇ ಪ್ರಮಾಣದಲ್ಲಿ ಈ ವರ್ಷವೂ ಸೀಟು ಹಂಚಿಕೆ ಆಗಬಹುದು. ಸರ್ಕಾರಿ ಕೋಟಾ ಸೀಟುಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿದ್ದು, ಅದರಲ್ಲಿ ಪಡೆಯುವ ಅಂಕಗಳನ್ನು ಆಧರಿಸಿ ಕೌನ್ಸೆಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ.

ಕಾಮೆಡ್-ಕೆ ಕೋಟಾ ಸೀಟುಗಳ ಭರ್ತಿಗೆ, ಕಾಮೆಡ್-ಕೆ ಮೇ ತಿಂಗಳಿನಲ್ಲಿ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಲಿದೆ. ಅಲ್ಲಿಯೂ ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಶುಲ್ಕ ಎಷ್ಟು ಎಂಬುದು ಇನ್ನೂ ನಿರ್ಧಾರ ಆಗಿಲ್ಲ. ಇಲ್ಲೂ ಸಹ ಸರ್ಕಾರಿ ಮತ್ತು ಕಾಮೆಡ್–ಕೆ ಕೋಟಾ ಸೀಟುಗಳಿಗೆ ಸರ್ಕಾರ ಶುಲ್ಕ ನಿಗದಿ ಮಾಡಲಿದೆ. ಅನಿವಾಸಿ ಭಾರತೀಯ ಮತ್ತು ಆಡಳಿತ ಮಂಡಳಿ ಕೋಟಾ ಸೀಟುಗಳಿಗೆ ಆಯಾ ಕಾಲೇಜುಗಳು ಶುಲ್ಕ ನಿಗದಿ ಮಾಡಲಿವೆ.

ರಾಜ್ಯದಲ್ಲಿ 12 ಖಾಸಗಿ ಮತ್ತು 8 ಡೀಮ್ಡ್ ವಿಶ್ವವಿದ್ಯಾಲಯಗಳಿದ್ದು, ಅವು ತಮ್ಮದೇ ಆದ ಪ್ರತ್ಯೇಕ ಪ್ರವೇಶ ಪರೀಕ್ಷೆ ಮೂಲಕ ಎಂಜಿನಿಯರಿಂಗ್ ಸೀಟುಗಳನ್ನು ಭರ್ತಿ ಮಾಡುತ್ತವೆ. ಇನ್ನು ಹತ್ತು ಭಾಷಾ ಮತ್ತು ಧಾರ್ಮಿಕ ಅಲ್ಪಸಂಆಖ್ಯಾತ ಎಂಜಿನಿಯರಿಂಗ್ ಕಾಲೇಜುಗಳಿದ್ದು, ಅವುಗಳಲ್ಲಿನ ಸೀಟುಗಳ ಭರ್ತಿಗೆ ಕರ್ನಾಟಕ ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಘ, ಮೇ ತಿಂಗಳ 20ರಂದು ಪ್ರತ್ಯೇಕ ಪರೀಕ್ಷೆ ನಡೆಸುತ್ತದೆ.

ಅರ್ಹತೆ: ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ತೆಗೆದುಕೊಳ್ಳಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪಿಯುಸಿಯಲ್ಲಿ ಶೇ 45ರಷ್ಟು ಅಂಕಗಳನ್ನು ಹಾಗೂ ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ–1, ಪ್ರವರ್ಗ 2ಎ, 2ಬಿ, ಪ್ರವರ್ಗ 3ಎ, 3ಬಿ ವರ್ಗದ ಅಭ್ಯರ್ಥಿಗಳು ಶೇ 40ರಷ್ಟು ಅಂಕಗಳನ್ನು ಪಡೆದಿರಬೇಕು.

ಹೆಚ್ಚಿನ ಸಂಖ್ಯೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳು ರಾಜ್ಯಕ್ಕೆ ಬರುತ್ತಿದ್ದು, ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂಗ್ಲಿಷ್‌ನಲ್ಲಿ ಉತ್ತಮ ಸಂವಹನ, ಕೌಶಲ ಹೊಂದಿರುವ ಯುವಕ-ಯುವತಿಯರು ಕ್ಯಾಂಪಸ್ ಸಂದರ್ಶನ ಮೂಲಕ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆಯುತ್ತಿದ್ದಾರೆ. ಎಂಜಿನಿಯರಿಂಗ್ ಕೋರ್ಸ್‌ಗೆ ಸೇರಿದ ಆರಂಭದಿಂದಲೇ ಕಂಪ್ಯೂಟರ್ ಜ್ಞಾನ, ಇಂಗ್ಲಿಷ್ ಸಂವಹನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಮೂಲಕ ಸಂದರ್ಶನಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಬೇಕು. ಇದರಿಂದ ಮುಂದೆ ಉದ್ಯೋಗ ಗಿಟ್ಟಿಸಿಕೊಳ್ಳಲು ಅನುಕೂಲವಾಗಲಿದೆ ಎನ್ನುತ್ತಾರೆ ಸಾಫ್ಟ್‌ವೇರ್ ಎಂಜಿನಿಯರ್ ಕೆ.ಮಂಜುನಾಥ್.

ಪ್ರಮುಖ ವಿಷಯಗಳು (ಎಂಜಿನಿಯರಿಂಗ್)

* ಸಿವಿಲ್
* ಕೆಮಿಕಲ್
* ಆಟೊಮೊಬೈಲ್
* ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್
* ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್
* ಕಂಪ್ಯೂಟರ್ ಸೈನ್
* ಮಾಹಿತಿ ತಂತ್ರಜ್ಞಾನ (ಐಟಿ)
* ಮೆಕೆಟ್ರಾನಿಕ್ಸ್
* ಬಯೊಟೆಕ್ನಾಲಜಿ
* ಮೆಕ್ಯಾನಿಕಲ್
* ಆರ್ಕಿಟೆಕ್ಚರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.