ಹುಬ್ಬಳ್ಳಿ: ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಝಡ್ಪ್ಲಸ್ ಭದ್ರತೆ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಇಲ್ಲಿನ ಮಧುರಾ ಕಾಲೊನಿಯಲ್ಲಿರುವ ಅವರ ಮನೆಯನ್ನು 15 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಿಸುವ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿದೆ.

ಭದ್ರತೆ ಸಂಬಂಧ ಗೃಹ ಇಲಾಖೆಯಿಂದ ಬಂದ ನಿರ್ದೇಶನದ ಮೇರೆಗೆ ಅವಳಿ ನಗರ ಪೊಲೀಸ್ ಆಯುಕ್ತ ಡಾ.ಕೆ.ರಾಮಚಂದ್ರರಾವ್ ಧಾರವಾಡ ಜಿಲ್ಲಾಧಿಕಾರಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಪತ್ರ ಬರೆದಿದ್ದರು. ಈ ಪತ್ರ ಆಧರಿಸಿ, ಪೊಲೀಸ್ ಇಲಾಖೆ ಮಾರ್ಗಸೂಚಿಯಂತೆ ನವೀಕರಣ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಲೋಕೋಪಯೋಗಿ ಇಲಾಖೆಗೆ ಲಿಖಿತ ಸೂಚನೆ ನೀಡಿದ್ದಾರೆ.

ಕಾಂಪೌಂಡ್ ಎತ್ತರಿಸಲು ಮತ್ತು ಗಾರ್ಡ್ ಕೊಠಡಿ ನಿರ್ಮಾಣಕ್ಕೆ ಐದು ಲಕ್ಷ ರೂಪಾಯಿ ಹಾಗೂ ಮನೆಯ ವಿದ್ಯುದೀಕರಣ ಕಾಮಗಾರಿ, ಸಿ.ಸಿ ಟಿ.ವಿ ಕ್ಯಾಮೆರಾಗಳ ಅಳವಡಿಕೆ ಕಾರ್ಯವನ್ನು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.

ಪುಣೆಯಲ್ಲಿ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಸಂಚರಿಸಬೇಕಿದ್ದ ದಾರಿಯಲ್ಲಿ ಸರಣಿ ಬಾಂಬ್ ಸ್ಫೋಟ ನಡೆದ ನಂತರ ಗಣ್ಯ ವ್ಯಕ್ತಿಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ ಎಂದು ಶೆಟ್ಟರ್ ಮನೆಯ ಭದ್ರತೆ ಉಸ್ತುವಾರಿ ಹೊತ್ತಿರುವ ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.

ಶೆಟ್ಟರ್ ಮುಖ್ಯಮಂತ್ರಿಯಾದ ನಂತರ ಅವರ ಕುಟುಂಬ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರೂ ಹುಬ್ಬಳ್ಳಿಯ ಮನೆಗೆ ತಿಂಗಳಲ್ಲಿ ಎರಡು ಅಥವಾ ಮೂರು ಬಾರಿ ಬರುತ್ತಾರೆ. ಹಾಗಾಗಿ ಇಲ್ಲಿನ ನಿವಾಸಕ್ಕೂ ಅಲ್ಲಿನ ರೀತಿಯಲ್ಲಿಯೇ ಭದ್ರತೆ ನೀಡಲು ಯೋಜನೆ ರೂಪಿಸಲಾಗಿದೆ. ಮಧುರಾ ಕಾಲೊನಿಯನ್ನು ಅತಿಸೂಕ್ಷ್ಮ ವಲಯ ಎಂದು ಗುರುತಿಸಲಾಗಿದೆ. ಆದರೆ ಸಿ.ಎಂ ಮನೆಯ ಸುತ್ತಲಿನ ನಿವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ರಕ್ಷಣಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳುತ್ತಾರೆ.

24 ಗಂಟೆ ಕಣ್ಗಾವಲು: ಮನೆಯ ಕಾಂಪೌಂಡ್ ಎತ್ತರವನ್ನು ಮೂರು ಅಡಿ ಹೆಚ್ಚಿಸಿ, ಅದರ ಮೇಲೆ ತಂತಿ ಬೇಲಿ ಅಳವಡಿಸಲಾಗುತ್ತಿದೆ.

ಮನೆಯ ಹೊರಗಿನ ಪೊಲೀಸ್ ಚೌಕಿ ಜೊತೆಗೆ ಕಾಂಪೌಂಡ್ ಒಳಭಾಗದಲ್ಲಿ ವಿಶೇಷ ಗಾರ್ಡ್ರೂಂ ಹಾಗೂ ಬಂಕರ್ ವ್ಯವಸ್ಥೆ ಮಾಡಲಾಗುತ್ತಿದೆ. ಮನೆಯ ಸುತ್ತಲಿನ ವಿದ್ಯಮಾನಗಳನ್ನು ಗಮನಿಸಲು ಏಳು ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಿ 24 ಗಂಟೆ ಕಣ್ಗಾವಲಿಗೆ ಕಂಟ್ರೋಲ್ ರೂಂ ತೆರೆಯಲಾಗುತ್ತಿದೆ. ಪ್ರತೀ ಐದು ದಿನಕ್ಕೊಮ್ಮೆ ಬಾಂಬ್ ನಿಷ್ಕ್ರಿಯ ದಳ ಇಡೀ ಮನೆಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಸಿ.ಎಂ ಹುಬ್ಬಳ್ಳಿಯಲ್ಲಿ ಇಲ್ಲದ ವೇಳೆಯೂ ಸಿಎಆರ್ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಸೇರಿದಂತೆ 10 ಮಂದಿಯ ತಂಡ ಕಾವಲು ಕಾಯಲಿದೆ.

ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎನ್.ಎಂ.ಕುಲಕರ್ಣಿ ನೇತೃತ್ವದಲ್ಲಿ ಶೆ ಟ್ಟರ್ ನಿವಾಸದ ನವೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.