ಜಿಲ್ಲೆಯ ಅಫಜಲಪುರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪರಿವರ್ತನಾ ಯಾತ್ರೆಯಲ್ಲಿ ಅವರು ಮಾತನಾಡಿದರು.
‘ಪ್ರತಾಪ್ಸಿಂಹ ಹಾಗೂ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ ಅವರು, ‘ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿರುವ ಸಿದ್ದರಾಮಯ್ಯ ಇನ್ನು ಮೂರು ತಿಂಗಳು ಮಾತ್ರ ಅಧಿಕಾರದಲ್ಲಿ ಇರುತ್ತಾರೆ. ಹೀಗಾಗಿ ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ’ ಎಂದು ವ್ಯಂಗ್ಯವಾಡಿದರು.