ಬೆಂಗಳೂರು: ‘ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ನೀಡುವ ಶೇ 25ರಷ್ಟು ಪ್ರವೇಶ ಮೀಸಲಾತಿಯಲ್ಲಿ ಮೊದಲು ಸರ್ಕಾರಿ ಶಾಲೆಗಳಲ್ಲಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಮಕ್ಕಳನ್ನು ದಾಖಲು ಮಾಡಿಕೊಳ್ಳಿ. ಬಳಿಕವೂ ಅರ್ಹ ಮಕ್ಕಳು ಉಳಿದಿದ್ದರೆ ಖಾಸಗಿ ಅನುದಾನರಹಿತ ಶಾಲೆಗಳಿಗೆ ಕಳುಹಿಸಿ’.

ಹೀಗೆಂದು ಕರ್ನಾಟಕ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘವು (ಕುಸ್ಮಾ) ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದೆ. ಈ ಸಂಬಂಧ ಕುಸ್ಮಾ ವಕೀಲ ಕೆ.ವಿ.ಧನಂಜಯ ಅವರು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಿಗೆ ಬುಧವಾರ ಆರು ಪುಟಗಳ ‘ಎಚ್ಚರಿಕೆ’ ಪತ್ರ ಬರೆದಿದ್ದಾರೆ.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೂ ಪತ್ರ ರವಾನಿಸಿದ್ದಾರೆ. ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ಮಾಡುತ್ತಿರುವ ವೆಚ್ಚದ ಬಗ್ಗೆಯೂ ಪತ್ರದಲ್ಲಿ ಬೆಳಕು ಚೆಲ್ಲಿದ್ದಾರೆ. ‘ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಖಾಲಿ ಸೀಟುಗಳು ಖಾಲಿ ಇದ್ದರೂ ಖಾಸಗಿ ಶಾಲೆಗಳ ಕಡೆಗೆ ಯಾಕೆ ಬರುತ್ತೀರಿ’ ಎಂದು ಅವರು ಪ್ರಶ್ನಿಸಿದ್ದಾರೆ.

ಆರ್‌ಟಿಇ ಅಡಿಯಲ್ಲಿ ಶೇ 25 ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಫೆ.19ರಂದು ಮುಕ್ತಾಯಗೊಂಡಿದೆ. ಈಗಾಗಲೇ ಬಹುತೇಕ ಶಾಲೆಗಳು ಆಯ್ಕೆ ಪಟ್ಟಿಯನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಿವೆ. ಮಾ. 3ರೊಳಗೆ ದಾಖಲಾತಿ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಖಾಸಗಿ ಶಾಲೆಗಳಿಗೆ ಕಳುಹಿಸಬೇಕಿದೆ.

ಒಟ್ಟಾರೆ ದಾಖಲಾತಿ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಈ ಹೊತ್ತಿನಲ್ಲೇ 1,800 ಸದಸ್ಯ ಶಾಲೆಗಳನ್ನು ಹೊಂದಿರುವ ಸಂಘಟನೆಯು ಶಿಕ್ಷಣ ಇಲಾಖೆಯ ಜೊತೆಗೆ ಸಂಘರ್ಷದ ಹಾದಿ ತುಳಿದಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆ ನಡೆಯುವುದು ಮೇ ಅಂತ್ಯದಲ್ಲಿ. ಖಾಸಗಿ ಶಾಲೆಗಳಲ್ಲಿ ಬಹುತೇಕ ದಾಖಲಾತಿ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ಇಲಾಖೆ ಸೂಚನೆಯ ಹಿನ್ನೆಲೆಯಲ್ಲಿ ಆರ್‌ಟಿಇ ಅನುಷ್ಠಾನಕ್ಕೆ ಹೆಚ್ಚಿನ ಶಾಲೆಗಳು ಶೇ 25 ಸೀಟು ಮಾತ್ರ ಉಳಿಸಿಕೊಂಡಿವೆ.

‘ರಾಜ್ಯದಲ್ಲಿ 56,305 ಸರ್ಕಾರಿ ಪ್ರಾಥಮಿಕ ಶಾಲೆಗಳು, 3,160 ಖಾಸಗಿ ಅನುದಾನಿತ ಶಾಲೆಗಳು, 11,386 ಖಾಸಗಿ ಅನುದಾನರಹಿತ ಶಾಲೆಗಳು ಇವೆ. ಶೇ 87 ಪ್ರಾಥಮಿಕ ಶಾಲೆಗಳು ಗ್ರಾಮೀಣ ಭಾಗದಲ್ಲಿ ಇವೆ. ಶೇ 89ರಷ್ಟು ಗ್ರಾಮೀಣ ಪ್ರಾಥಮಿಕ ಶಾಲೆಗಳು ಸರ್ಕಾರಿ ಶಾಲೆಗಳು ಆಗಿವೆ. ಸರ್ಕಾರಿ ಶಾಲೆಗಳ 2,28,681 ಶಿಕ್ಷಕರ ವೇತನ ಪಾವತಿಗಾಗಿಯೇ ರಾಜ್ಯ ಸರ್ಕಾರ ವಾರ್ಷಿಕ ₨3,292 ಕೋಟಿ ವೆಚ್ಚ ಮಾಡುತ್ತಿದೆ. ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಭಾರಿ ಖರ್ಚು ಮಾಡುತ್ತಿದ್ದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಶಾಲೆಗಳನ್ನು ಶುಷ್ಕಗೊಳಿಸಲು ಯಾಕೆ ಪ್ರಯತ್ನಿಸುತ್ತಿದ್ದಾರೆ’ ಎಂದು ಧನಂಜಯ್ ಕಟುವಾಗಿ ಪ್ರಶ್ನಿಸಿದ್ದಾರೆ.

‘ಸರ್ಕಾರ ಆರ್‌ಟಿಇ ಕಾಯ್ದೆಯಡಿ ನೆರೆಹೊರೆ ಶಾಲೆಗಳನ್ನು ತಪ್ಪಾಗಿ ವ್ಯಾಖ್ಯಾನಿಸಿದೆ. ಅನುದಾನಿತ ಶಾಲೆಗಳನ್ನು ಮಾತ್ರ ನೆರೆಹೊರೆ ಶಾಲೆಗಳೆಂದು ಪರಿಗಣಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಆರ್‌ಟಿಇ ಕಾಯ್ದೆ ಅಡಿ ಮಕ್ಕಳನ್ನು ದಾಖಲು ಮಾಡಿಕೊಳ್ಳದೆ ನಮ್ಮ ಬಳಿಗೆ ಬಂದರೆ ಮರಳಿ ಸರ್ಕಾರಿ ಶಾಲೆಗಳಿಗೆ ಕಳುಹಿಸಲಾಗುವುದು. ಯಾವ ಸರ್ಕಾರಿ ಶಾಲೆಯಲ್ಲಿ ಸೀಟುಗಳು ಇವೆ ಎಂಬುದನ್ನೂ ಸಂಘಟನೆಯ ಸದಸ್ಯರು ತಿಳಿಸಲಿದ್ದಾರೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಆರ್‌ಟಿಇ ಕಾಯ್ದೆ ಅನುಷ್ಠಾನಕ್ಕೆ ‘ಕುಸ್ಮಾ’ ವಿರೋಧ ಇಲ್ಲ. ಬಡ ಮಕ್ಕಳನ್ನು ದಾಖಲು ಮಾಡಿಕೊಳ್ಳಲು ಹಿಂಜರಿಕೆ ಇಲ್ಲ. ಆದರೆ, ರಾಜ್ಯದಲ್ಲಿ ಸಮರ್ಪಕವಾಗಿ ಕಾಯ್ದೆ ಅನುಷ್ಠಾನ ಆಗುತ್ತಿಲ್ಲ. ಸಮಗ್ರವಾಗಿ ಕಾಯ್ದೆ ಅನುಷ್ಠಾನ ಆಗಬೇಕು. ಜೊತೆಗೆ, ಅನಗತ್ಯವಾಗಿ ಖಾಸಗಿ ಶಾಲೆಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು’ ಎಂದು ಅವರು ವಿನಂತಿಸಿದರು.

‘ಇಲಾಖೆ ತಪ್ಪಾಗಿ ಆರ್‌ಟಿಇ ಕಾಯ್ದೆಯನ್ನು ಅರ್ಥೈಸಿಕೊಂಡಿದೆ. ಈ ಕಾನೂನು ಒಂದು ರೀತಿ ಇದೆ. ಸರ್ಕಾರ ಮತ್ತೊಂದು ರೀತಿ ವ್ಯಾಖ್ಯಾನಿಸುತ್ತಿದೆ. ಇದನ್ನು ಮೊದಲು ಸರಿಪಡಿಸಬೇಕು. ಒಂದು ಪಕ್ಷ ಶಾಲೆಗಳನ್ನು ಮುಚ್ಚುತ್ತೇವೆ ಎಂದು ಹೇಳಿದರೂ ಇದಕ್ಕೆ ಬೆದರುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ಹಣ ಮರುಪಾವತಿ ಇಲ್ಲ
ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಸರಿಯಾಗಿ ಆರ್‌ಟಿಇ ಶುಲ್ಕ ಮರುಪಾವತಿ ಮಾಡುತ್ತಿಲ್ಲ. ಇದರಿಂದ ಶಾಲೆಗಳು ಸಮಸ್ಯೆ ಎದುರಿಸುತ್ತಿವೆ. ಒಂದೊಂದು ಶಾಲೆಗೆ ಒಂದೊಂದು ರೀತಿಯಲ್ಲಿ ಶುಲ್ಕ ಪಾವತಿ ಮಾಡಲಾಗುತ್ತಿದೆ. ಈ ರೀತಿ ಮಾಡಿದರೆ ಶಾಲೆಗಳನ್ನು ನಡೆಸುವುದು ಕಷ್ಟ. ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಸಮಸ್ಯೆಯನ್ನು ಮನವರಿಕೆ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ.
–ಎ.ಮರಿಯಪ್ಪ, ಕುಸ್ಮಾ ಕಾರ್ಯದರ್ಶಿ

ಕಾನೂನು ಪ್ರಕಾರ ಕ್ರಮ: ಎಚ್ಚರಿಕೆ
ಬುಧವಾರ ಸಂಜೆ ವರೆಗೂ ನನಗೆ ಪತ್ರ ಬಂದಿಲ್ಲ. ‘ಕುಸ್ಮಾ’ ಸಂಘಟನೆಯ ಸವಾಲಿನ ಬಗ್ಗೆಯೂ ಹೆಚ್ಚಿನ ಮಾಹಿತಿ ಇಲ್ಲ. ಆರ್‌ಟಿಇ ಅಡಿಯಲ್ಲಿ ಕಳೆದೆರಡು ವರ್ಷಗಳಲ್ಲಿ ಮಕ್ಕಳನ್ನು ದಾಖಲು ಮಾಡಿಕೊಂಡ ಮಾದರಿಯಲ್ಲೇ ಈ ವರ್ಷವೂ ಸೇರಿಸಿಕೊಳ್ಳಬೇಕು. ಅದೇ ರೀತಿ ಪ್ರಕ್ರಿಯೆ ನಡೆಯಲಿದೆ. ಮಕ್ಕಳ ದಾಖಲು ಮಾಡಿಕೊಳ್ಳಲು ನಿರಾಕರಿಸಿದ ಶಾಲೆಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು.
–ಮೊಹಮ್ಮದ್ ಮೊಹಿಸಿನ್,
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.