ಮೈಸೂರು: ನಗರದಲ್ಲಿ ಮಂಗಳವಾರ ರಾತ್ರಿಯಿಡೀ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ನಗರದ ಶ್ರೀರಾಂಪುರ ಬಡಾವಣೆಯ 3ನೇ ಕ್ರಾಸ್ನ ತಗ್ಗು ಪ್ರದೇಶದ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಗುಂಡೂರಾವ್ ನಗರ, ಪಡುವಾರಹಳ್ಳಿ, ಗೌಸಿಯಾನಗರ ಮತ್ತಿತರ ಹಲವು ಬಡಾವಣೆಗಳ ಮನೆಗಳು ಜಲಾವೃತಗೊಂಡಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಲೀಂ ನಗರದಲ್ಲಿ ನರ್ಮ್ ಯೋಜನೆ ಅಡಿ ನಿರ್ಮಿಸಲಾಗಿದ್ದ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರೇ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ಈ ಮಧ್ಯೆ, ಅನಾಹುತಕ್ಕೆ ಸಂಬಂಧಿಸಿ ಪಾಲಿಕೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ್ದರೂ ಸಮಸ್ಯೆಗೆ ಸ್ಪಂದಿಸಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.