ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ದಾಖಲೆ ಪರಿಶೀಲನೆ ಆರಂಭ

Last Updated 6 ಜೂನ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ವೃತ್ತಿಪರ ಕೋರ್ಸ್‌ಗಳ ಆಯ್ಕೆಗಾಗಿ ವಿವಿಧ ಜಿಲ್ಲೆಗಳಲ್ಲಿ ಗುರುವಾರದಿಂದ ದಾಖಲೆಗಳ ಪರಿಶೀಲನೆ ಆರಂಭವಾಯಿತು.1ರಿಂದ 2000 ರ‍್ಯಾಂಕ್‌ಗಳ ವರೆಗಿನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲಾಯಿತು.

ರಾಮನಗರದಲ್ಲಿಬೆಳಿಗ್ಗೆ ಬಿಎಸ್‌ಎನ್‌ಎಲ್‌ ಅಂತರ್ಜಾಲ ಲಭ್ಯವಾಗಲಿಲ್ಲ. ಇದರಿಂದಾಗಿ ದಾಖಲೆ ಪರಿಶೀಲನೆಗೆ ತೊಡಕಾಯಿತು. ದೂರದಿಂದ ಬಂದಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಲೇ ಇದ್ದರು.

ಕೇಂದ್ರದ ನೋಡಲ್‌ ಅಧಿಕಾರಿಗಳು ಬಿಎಸ್‌ಎನ್‌ಎಲ್‌ ಅಧಿಕಾರಿಗಳನ್ನು ಸಂಪರ್ಕಿಸುವ ಪ್ರಯತ್ನ ಮಾಡಿದರೂ ಸ್ಪಂದನೆ ದೊರೆಯಲಿಲ್ಲ. ಮಧ್ಯಾಹ್ನ 12 ಗಂಟೆ ವೇಳೆಗೆ ಪರ್ಯಾಯ ಅಂತರ್ಜಾಲ ವ್ಯವಸ್ಥೆ ಬಳಸಿ ದಾಖಲೆ ಪರಿಶೀಲನೆ ನಡೆಸಲಾಯಿತು.

ಶುಕ್ರವಾರ 2001ರಿಂದ 5 ಸಾವಿರ ರ‍್ಯಾಂಕ್‌ನವರ ದಾಖಲೆ ಪರಿಶೀಲನೆ ನಡೆಯಲಿದೆ. ಮೂಲ ದಾಖಲೆಗಳೊಂದಿಗೆ ದೃಢೀಕೃತ ಒಂದು ಸೆಟ್‌ ಪ್ರತಿಯನ್ನು ತರಬೇಕು.

ಡಿಪ್ಲೊಮಾ ಪರೀಕ್ಷೆ: ಜುಲೈ 14ರಂದು ಡಿಪ್ಲೊಮಾ ಸಿಇಟಿಪರೀಕ್ಷೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸದೆ ಇರುವವರು ಇದೇ 10ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ http://kea.kar.nic.in ವೆಬ್‌ಸೈಟ್‌ ಸಂಪರ್ಕಿಸಬಹುದು ಎಂದು ಕೆಇಎ ಆಡಳಿತಾಧಿಕಾರಿ ಅವರ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT