ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿಜಲಿಂಗಪ್ಪನವರ 111ನೇ ಜನ್ಮದಿನಾಚರಣೆ ನಿಮಿತ್ತ ವಿಧಾನಸೌಧದ ಆವರಣದಲ್ಲಿರುವ ನಿಜಲಿಂಗಪ್ಪ ಪ್ರತಿಮೆಗೆ ಮಂಗಳವಾರ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿವಾಸವನ್ನು ಸರ್ಕಾರದ ವಶಕ್ಕೆ ನೀಡಲು ರೂ. 2 ಕೋಟಿ ಕೊಡುವಂತೆ ಅವರ ಕುಟುಂಬದವರು ಬೇಡಿಕೆ ಇಟ್ಟಿದ್ದರು. ಆ ಮೊತ್ತ ನೀಡಿ ಮನೆಯನ್ನು ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದರು.

ನಿಗಮ – ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ಶುರುವಾಗಿದ್ದು, ಆದಷ್ಟು ಬೇಗ ಪೂರ್ಣವಾಗಲಿದೆ ಎಂದರು.
ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಮಾತನಾಡಿ, ನಿಜಲಿಂಗಪ್ಪ ಸಮಾಧಿ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿರುವ ಪ್ರತಿಮೆ ನಿಜಲಿಂಗಪ್ಪ ಅವರನ್ನು ಹೋಲುವುದಿಲ್ಲ. ಹೀಗಾಗಿ ಅದನ್ನು ಬದಲಾಯಿಸಬೇಕು ಎಂದು ಈ ಸಂದರ್ಭದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.