ಹೊಸಪೇಟೆ(ಬಳ್ಳಾರಿ): ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಹೆಚ್ಚಳವಾಗಿದ್ದು, ಒಂದೇ ದಿನದಲ್ಲಿ ಎರಡು ಟಿ.ಎಂ.ಸಿ.ಅಡಿಗಿಂತಲೂ ಅಧಿಕ ನೀರು ಅಣೆಕಟ್ಟೆಗೆ ಹರಿದು ಬಂದಿದೆ.
ಬುಧವಾರ ಅಣೆಕಟ್ಟೆಯಲ್ಲಿ 5.31 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿತ್ತು. ಗುರುವಾರ 7.75 ಟಿ.ಎಂ.ಸಿ. ಅಡಿಗೆ ಏರಿಕೆಯಾಗಿದೆ. 28,367 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಬುಧವಾರ 6,878 ಕ್ಯುಸೆಕ್ ಒಳಹರಿವು ಇತ್ತು.
ಶಿವಮೊಗ್ಗ ಜಿಲ್ಲೆಯ ತುಂಗಾ ಜಲಾಶಯ ತುಂಬಿದ್ದು, ಕ್ರಸ್ಟ್ ಗೇಟ್ ಗಳ ಮೂಲಕ ನೀರು ಹರಿಸುತ್ತಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ.