ರಾಜ್ಯದಾದ್ಯಂತ ಒಣ ಹವೆ
ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ ಸಂಭವಿಸಿದ್ದು, ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 14.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.