ಎಲ್ಲೆಡೆ ಒಣಹವೆ
ಬೆಂಗಳೂರು: ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 13.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.