ಗುಲ್ಬರ್ಗ: ಹಸಿವಿನಿಂದ ಕಂಗಾಲಾಗಿದ್ದ ಅಪರಿಚಿತ ವ್ಯಕ್ತಿಯೊಬ್ಬ ಜಾಲಿಗಿಡದ ಎಲೆ ತಿನ್ನುತ್ತಲೆ ಮೃತಪಟ್ಟ ಹೃದಯವಿದ್ರಾವಕ ಘಟನೆ ಚಿತ್ತಾಪುರ ತಾಲ್ಲೂಕು ಶಹಾಬಾದ್ನ ಹರಳಯ್ಯ ನಗರದಲ್ಲಿ ಬುಧವಾರ ನಡೆದಿದೆ.

ಗಿರಿಧರ ಎಸ್. ಎನ್ನುವವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಮಿಲ್ಲತ್ ನಗರ ಮಾರ್ಗದಿಂದ ಜಾಲಿಗಿಡದ ಎಲೆ ತಿನ್ನುತ್ತಾ ಬಂದವನು, ಮನೆ ಎದುರಿಗೆ ಕುಸಿದ. ಕೂಡಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.

ಈತ ಹಸಿವಿನಿಂದ ಸತ್ತಿರಬಹುದು ಎಂದು ಶಂಕಿಸಲಾಗಿದ್ದು, ಮೃತನ ವಯಸ್ಸು 30 ಎಂದು ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಶಹಾಬಾದ್ ನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.